ಹುಬ್ಬಳ್ಳಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಮತ್ತು ಸುಳ್ಯ ಬಿಜೆಪಿಯ ಮಹಿಳಾ ಶಾಸಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಕಿಡಿಗೇಡಿಗಳನ್ನು ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ

Jan 9, 2026 - 15:45
 0  415
ಹುಬ್ಬಳ್ಳಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಮತ್ತು ಸುಳ್ಯ ಬಿಜೆಪಿಯ ಮಹಿಳಾ ಶಾಸಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಕಿಡಿಗೇಡಿಗಳನ್ನು ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ

ಮಡಿಕೇರಿ: ಹುಬ್ಬಳ್ಳಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಮತ್ತು ಸುಳ್ಯ ಬಿಜೆಪಿಯ ಮಹಿಳಾ ಶಾಸಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಕಿಡಿಗೇಡಿಗಳನ್ನು ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.ಹುಬ್ಬಳ್ಳಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯನ್ನು ವಿವಸ್ತ್ರ

ಗೊಳಿಸಿ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ. ಅಲ್ಲದೇ, ಸುಳ್ಯ ಬಿಜೆಪಿಯ ಮಹಿಳಾ ಶಾಸಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಶ್ರದ್ಧಾಂಜಲಿ ಅರ್ಪಿಸಿ ಕಟುವಾದ ಶಬ್ಧಗಳಿಂದ ನಿಂದಿಸುವ ಮೂಲಕ ವಿಕೃತಿಯನ್ನು ಮರೆದಿರುವ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಕೃತ್ಯವೆಸಗಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

ಪತ್ರಿಭಟನಾ ನಿರತರು ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಣ ನಾಪಂಡ ರವಿ ಕಾಳಪ್ಪ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ,ಅನಿತಾ ಪೂವಯ್ಯ, ಮಹೇಶ್ ಜೈನಿ, ಅರುಣ್ ಕುಮಾರ್, ವಿ.ಕೆ.ಲೋಕೇಶ್, ಕಿಶೋರ್, ರಾಬಿನ್ ದೇವಯ್ಯ

 ಸುಬ್ರಮಣಿ ಸೇರಿದಂತೆ ಜಿಲ್ಲೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0