ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಲಾಜಾಥ ವಿಶೇಷ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಚಾಲನೆ

Feb 20, 2026 - 23:31
 0  180
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಲಾಜಾಥ ವಿಶೇಷ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಚಾಲನೆ

ಮಡಿಕೇರಿ ಫೆ.20:-ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಲಾಜಾಥ ವಿಶೇಷ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಕಂಜರ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಸೇರಿದಂತೆ ಸರ್ಕಾರದ ಹಲವು ವಿಷಯಗಳ ಕುರಿತು ವಿಶೇಷ ಪ್ರಚಾರಾಂದೋಲನವನ್ನು ಜಿಲ್ಲೆಯ ಹಲವು ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಒಂದಲ್ಲ ಒಂದು ರೀತಿಯಲ್ಲಿ ಜನರಿಗೆ ತಲುಪುತ್ತಿದ್ದು, ಈ ಯೋಜನೆಗಳ ಮಹತ್ವ ಕುರಿತು ಕಲಾಜಾಥ ಮೂಲಕ ವಿಶೇಷ ಪ್ರಚಾರಾಂದೋಲನ ಆಯೋಜಿಸಲಾಗಿದೆ ಎಂದರು.

 ಕಲಾವಿದ ಈ.ರಾಜು ಮತ್ತು ತಂಡದವರು ಯೋಜನೆ ‘ಯೋಜನೆ ಬಂತಣ್ಣ. ಗ್ಯಾರಂಟಿ ಯೋಜನೆ ಬಂತಣ್ಣ.. ಮಹಿಳೆಯರ ಪಾಲಿಗೆ ದಾರಿ ದೀಪವಣ್ಣ, ಬಡವರ ಮುಖದಲ್ಲಿ ನಗೆ ಮೂಡಿತಣ್ಣ...’ ಹಾಡು ಹಾಡುವ ಮೂಲಕ ಗಮನ ಸೆಳೆದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಭೀಮರಾಯ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಹೇಮಂತ್ ರಾಜ್, ಇತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0