ಜಿಲ್ಲಾ‌ ಕುಲಾಲ(ಕುಂಬಾರ) ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶಕ್ಕೆ ಎಲ್ಲರೂ ಕೈ ಜೋಡಿಸಬೇಕು:ಶಾಸಕ ಎಎಸ್ ಪೊನ್ನಣ್ಣ

ಜಿಲ್ಲಾ‌ ಕುಲಾಲ(ಕುಂಬಾರ) ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶಕ್ಕೆ ಎಲ್ಲರೂ ಕೈ ಜೋಡಿಸಬೇಕು:ಶಾಸಕ ಎಎಸ್ ಪೊನ್ನಣ್ಣ

ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಚಾಂಪಿಯನ್ಸ್ ಟ್ರೋಫಿ-2025 ಸೀಸನ್ 1 ಪಂದ್ಯಾಟದ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಮೂರ್ನಾಡಿನ ಶ್ರೀ ಬಾಚಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡ ಈ ಪಂದ್ಯಾವಳಿಗೆ ಶುಭ ಕೋರಿದ ಮಾನ್ಯ ಶಾಸಕರು, ಕ್ರೀಡೆಯು ಕೊಡಗಿನ ಜನತೆಯ ಉಸಿರಿನಲ್ಲಿ ಹಾಸುಹೊಕ್ಕಿದೆ. ಇಂತಹ ಕ್ರೀಡಾಕೂಟಗಳು ಕ್ರೀಡಾ ಪ್ರತಿಭೆಯನ್ನು ಸಮಾಜದ ಮುನ್ನೆಲೆಗೆ ತರಲು ಅತ್ಯಂತ ಸಹಕಾರಿಯಾಗಲಿದೆ. ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಆಟವಾಡಿ, ತಮ್ಮ ಸಾಮರ್ಥ್ಯ ಪ್ರದರ್ಶಿಸುವುದರೊಂದಿಗೆ ಜೀವನದಲ್ಲಿ ಯಶಸ್ಸು ಕಾಣಲು ಮುನ್ನುಡಿ ಬ ರೆಯಬೇಕೆಂದು ಕರೆ ನೀಡಿದರು.

 ಕ್ರೀಡೆಯನ್ನು ಕ್ರೀಡಾ ಸ್ಪೂರ್ತಿಯಿಂದ ಆಸ್ವಾದಿಸುತ್ತಾ, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶಕ್ಕೆ ನಾಂದಿ ಹಾಡಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮುದಾಯದ ಭಾಂದವರು ಉಪಸ್ಥಿತರಿದ್ದರು.