ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಮಡಿಕೇರಿ:-ಕಳೆದ ಬಾರಿಯಂತೆ ಈ ಬಾರಿಯೂ ಸಹ ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿದರು.
ಕಳೆದ ಬಾರಿಯಂತೆ ಈ ಬಾರಿಯು ಸಹ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಿವಿಧ ಉಪ ಸಮಿತಿಗಳು ವಹಿಸಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.
ಗಣರಾಜ್ಯೋತ್ಸವವನ್ನು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಅಥವಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಮಾಹಿತಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಾಂಸ್ಕøತಿಕ ಕಾರ್ಯಕ್ರಮ ನಡೆಸುವ ಶಾಲೆಗಳ ವಿವರ ತಿಳಿಸಬೇಕು. ಜೊತೆಗೆ ರಿಹರ್ಸಲ್‍ನ್ನು ಮಾಡಿಕೊಳ್ಳಬೇಕು. ಶಾಲೆಯಲ್ಲಿಯೇ ಅಗತ್ಯ ತರಬೇತಿ ಪಡೆದು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಸಂಬಂಧ ಸ್ತಬ್ಧಚಿತ್ರ ಏರ್ಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಹಿಂದಿನಂತೆಯೇ ಕ್ರಮವಹಿಸುವಂತೆ ಆರ್.ಐಶ್ವರ್ಯ ಅವರು ಸಲಹೆ ಮಾಡಿದರು.
ಕಾರ್ಯಕ್ರಮ ನಿಮಿತ್ತ ಕಲಾತಂಡಗಳ ಆಹ್ವಾನ, ಮತ್ತಿತರ ಬಗ್ಗೆ ಗಮನಹರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು.
ರಿಹರ್ಸಲ್ ಹಾಗೂ ಕಾರ್ಯಕ್ರಮದ ದಿನ ಉಪಾಹಾರ ಪೂರೈಕೆ ಮಾಡುವುದು, ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಮತ್ತಿತರ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಹಾಗೆಯೇ ವೇದಿಕೆ ನಿರ್ಮಾಣ, ಸೇರಿದಂತೆ ಹಲವು ಕಾರ್ಯಕ್ರಮಗಳ ಸಂಬಂಧ ಗಮನಹರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ವಿವಿಧ ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳ ಸಂಬಂಧ ಇದೇ ಜನವರಿ, 14 ರೊಳಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಪ್ರಶಸ್ತಿ ವಿತರಣೆ ಇದ್ದಲ್ಲಿ 16 ರೊಳಗೆ ಮಾಹಿತಿ ನೀಡುವಂತಾಗಬೇಕು. ಸಾಂಸ್ಕøತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಜನವರಿ, 21 ರೊಳಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ನಗರದಲ್ಲಿರುವ ಎಲ್ಲಾ ಗಣ್ಯರ ಪ್ರತಿಮೆಗಳಿಗೆ ದೀಪಾಲಂಕಾರ ಮಾಡುವುದು ಸೇರಿದಂತೆ ಹಬ್ಬದ ರೀತಿ ಗಣರಾಜ್ಯೋತ್ಸವವನ್ನು ಆಚರಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಗಣರಾಜ್ಯೋತ್ಸವ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಳಸದಂತೆ ಎಚ್ಚರ ವಹಿಸಬೇಕು. ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಆರ್.ಐಶ್ವರ್ಯ ಅವರು ಹೇಳಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ಮಾತನಾಡಿ ಸಾಂಸ್ಕøತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಈ ಸಂಬಂಧ ಅಗತ್ಯ ಸಿದ್ಧತೆಯನ್ನು ಶಾಲೆಯಲ್ಲಿಯೇ ವಿದ್ಯಾರ್ಥಿಗಳು ಮಾಡಿಕೊಳ್ಳಬೇಕು. ಮೈದಾನದ ಮಧ್ಯಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದರು.
ವೇದಿಕೆ ನಿರ್ಮಾಣ ಮಾಡುವ ಸಂದರ್ಭದಲ್ಲಿಯೂ ಸಹ ಸೂಕ್ತ ಜಾಗದಲ್ಲಿ ನಿರ್ಮಿಸಬೇಕು ಎಂದು ಅವರು ಸಲಹೆ ಮಾಡಿದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಶಬ್ಧ ಚಿತ್ರ ಸಂಬಂಧ ಗಮನಹರಿಸಲಾಗುವುದು ಎಂದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಅಗತ್ಯ ಕ್ರಮವಹಿಸಲಾಗುವುದು. ಈ ಸಂಬಂಧ ರಿಹರ್ಸಲ್ ನಡೆಸಲಾಗುವುದು ಎಂದು ಹೇಳಿದರು.
ಲೋಕೋಪಯೋಗಿ, ಕಂದಾಯ, ಪಂಚಾಯತ್ ರಾಜ್, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು, ಕೃಷಿ, ತೋಟಗಾರಿಕೆ, ಪಶುಪಾಲನೆ, ಕನ್ನಡ ಮತ್ತು ಸಂಸ್ಕøತಿ ಹೀಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕಾರ್ಯಕ್ರಮ ಆಯೋಜನೆಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಜೊತೆಗೂಡಿ ಕಾರ್ಯನಿರ್ವಹಿಸಬೇಕು ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಪೌರಾಯುಕ್ತರಾದ ಎಚ್.ಆರ್.ರಮೇಶ್, ತಹಶೀಲ್ದಾರ್ ಶ್ರೀಧರ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ಜಿ.ಕೆ.ನಾಯಕ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್, ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಎಂಜಿನಿಯರ್ ಪ್ರಭು, ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಮ್ಮಿ ಸ್ವಿಕ್ವೇರಾ, ಭೂದಾಖಲೆಗಳ ಉಪನಿರ್ದೇಶಕರಾದ ನಿರಂಜನ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.