ಜಿಲ್ಲಾಮಟ್ಟದ ಅಥ್ಲೆಟಿಕ್ಸ್ : ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲೆಯ ಮೊಹಮ್ಮದ್ ಶಹೀಮ್ ರಾಜ್ಯಮಟ್ಟಕ್ಕೆ ಆಯ್ಕೆ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ಕುಶಾಲನಗರದ ಕೂಡಿಗೆಯಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಶಹೀಮ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಹೀಮ್ ನಾಪೋಕ್ಲುವಿನ ಬೇತು ಗ್ರಾಮದ ಶೌಕತ್ ಅಲಿ ಹಾಗು ಸಕೀನಾ ದಂಪತಿಗಳ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಅಧ್ಯಕ್ಷರು ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
