ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ

Jan 26, 2026 - 18:47
 0  259
ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ

ಮಡಿಕೇರಿ ಜ.26:- ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಎನ್‍ಆರ್‍ಎಲ್‍ಎಂ, ಸಂಜೀವಿನಿ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕೊಡಗು‌ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಗಾಂಧಿ ಮೈದಾನದಲ್ಲಿ ಸೋಮವಾರ ಚಾಲನೆ ನೀಡಿದರು.

 ಶಾಸಕರಾದ ಡಾ.ಮಂತರ್ ಗೌಡ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಮಡಿಕೇರಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0