ಜು.19ರಂದು ಜಿಲ್ಲಾಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ
ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ ಜು.೧೯ರಂದು ತಾಳತ್‌ಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್‌ನ ಪ್ರದಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಗ್ಗೆ ೧೦.೩೦ ಗಂಟೆಗೆ ನಡೆಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ ಅವರು ವಹಿಸಲಿದ್ದು, ಸಮಾಜಸೇವಕ ಹಾಗೂ ಬೆಳೆಗಾರ ಮಲ್ಲನ ಆನಂದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಪ್ರದೀಪ್ ಕರ್ಕೆರ, ತಾಳತ್‌ಮನೆ ಫಾರ್ಮರ್ಸ್ ಕ್ಲಬ್ ಅಧ್ಯಕ್ಷ ಜನನ್ ಪೊನ್ನೇಟ್ಟಿ, ವಿಶಾಲ್ ಮಾರ್ಟ್ ವ್ಯವಸ್ಥಾಪಕ ಕೆ.ಕೆ.ಗಿರೀಶ್, ಬೆಳೆಗಾರ ಚೆರಿಯಮನೆ ಪ್ರಸಾದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾ ಸಂಚಾಲಕ ಸಂತೋಷ್ ರೈ, ಸಂಘದ ಪ್ರದಾನ ಕಾರ್ಯದರ್ಶಿ ಹಾಗೂ ಸಂಚಾಲಕರಾದ ಹೆಚ್.ಜೆ.ರಾಕೇಶ್ ಮತ್ತು ಸ್ಟ್ಯಾನ್ಲಿ ಡೇವಿಡ್ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ೧ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ವಹಿಸಲಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ಟಮುಡಿ ಹಂಸ, ಕಾಂಗ್ರೆಸ್ ಮುಖಂಡ ಜಾನ್ಸನ್ ಪಿಂಟೋ, ಉದ್ಯಮಿ ರವಿ ಕರ್ಕೆರ ಹಾಗೂ ಕೊಡಗು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮತ್ತು ಕ್ರೀಡಾ ಸಂಚಾಲಕ ಮಂಜು ಸುವರ್ಣ, ಸಂಚಾಲಕರಾದ ಆರ್.ಆರ್.ಮುನೋಜ್ ಹಾಗೂ ಮಾಗುಲು ಲೋಹಿತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕೊಡಗು ಪ್ರೆಸ್ ಕ್ಲಬ್‌ನ ಪ್ರದಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
