ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ: ನಾಪೋಕ್ಲುವಿನ ಎಕ್ಸಲ್ ಶಾಲೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ: ನಾಪೋಕ್ಲುವಿನ ಎಕ್ಸಲ್ ಶಾಲೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವರದಿ:ಝಕರಿಯ ನಾಪೋಕ್ಲು ನಾಪೋಕ್ಲು: ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿ.ಮೇಕೆರಿರ ಕಾರ್ಯಪ್ಪ ಸ್ಮರಣಾರ್ಥ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಎಕ್ಸೆಲ್ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಮಡಿಕೇರಿಯ ಜನರಲ್ ತಿಮ್ಮಯ್ಯ ಶಾಲೆಯ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಸ್ಥಾನ ಲಭಿಸಿತು.ತೃತೀಯ ಸ್ಥಾನವನ್ನು ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳ ತಂಡ ಪಡೆದುಕೊಂಡರು.ಸಮಾಧಾನಕರ ಬಹುಮಾನಗಳನ್ನು ಮೂರ್ನಾಡು ಕೋಡಂಬೂರಿನ ಜ್ಞಾನಜ್ಯೋತಿ ಎಜುಕೇಶನ್ ಸೊಸೈಟಿ ಹಾಗೂ ಚೇರಂಬಾಣೆಯ ರಾಜರಾಜೇಶ್ವರಿ ಶಾಲಾ ತಂಡಗಳು ಪಡೆದುಕೊಂಡವು.

ಸ್ಪರ್ಧೆಯಲ್ಲಿಒಟ್ಟು 9 ತಂಡಗಳು ಪಾಲ್ಗೊಂಡಿದ್ದವು. ಶಾಲಾ ಸಭಾಂಗಣದಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಬೇತುಗ್ರಾಮದ ಎಕ್ಸೆಲ್ ಶಾಲೆಯ ವಿದ್ಯಾರ್ಥಿಗಳಾದ ದರ್ಶ ದೇಚಮ್ಮ,ದುಂಧುಭಿ ಹಾಗೂ ನಿಶಾಂತ್ ವಿದ್ಯಾರ್ಥಿಗಳ ತಂಡ 102 ಅಂಕಗಳಿಸಿ ಪ್ರಥಮ ಸ್ಥಾನ ಗಳಿಸಿತು.

 ವಿಜೇತ ತಂಡಕ್ಕೆ 5000 ರೂ.ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಮಡಿಕೇರಿಯ ಜನರಲ್ ತಿಮ್ಮಯ್ಯ ಶಾಲೆಯ ರಸಜ್ಞ ಮಾದಪ್ಪ,ಮೊಹಮದ್ ಶಾದಿನ್ ಮತ್ತು ಅನರ್ವ ಬೋಪಣ್ಣ ವಿದ್ಯಾರ್ಥಿಗಳ ತಂಡ 95 ಅಂಕ ಗಳಿಸಿ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.ಈ ತಂಡಕ್ಕೆ 4000 ರೂ.ನಗದು ಹಾಗೂ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ವಿರಾಜಪೇಟೆಯ ಕಾವೇರಿಶಾಲೆಯ ಶ್ರಿವತ್ಸ,ಸೃಷ್ಠಿಮತ್ತು ಮೊಹಮದ್ ಶಿಫಾನ್ ವಿದ್ಯಾರ್ಥಿಗಳ ತಂಡ 90 ಅಂಕಗಳಿಸಿ ತೃತೀಯ ಸ್ಥಾನ ಪಡೆದುಕೊಂಡಿತು. ಈ ತಂಡಕ್ಕೆ 2000 ರೂ.ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪಲ್ಲವಿ ಹೆಚ್ .ಸಿ.ಮಾತನಾಡಿ ರಸಪ್ರಶ್ನೆ ಸ್ಪರ್ಧೆಯು ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯವನ್ನು ಪತ್ತೆ ಹಚ್ಚುವ ಕಾರ್ಯಕ್ರಮವಾಗಿದೆ. ಜ್ಞಾನ ಅಗಾಧವಾದದ್ದು ವಿದ್ಯಾರ್ಥಿಗಳು ಅರಿವಿನ ಸಾಮರ್ಥ್ಯ ಎಷ್ಟಿರುತ್ತದೆ ಅಷ್ಟು ಜ್ಞಾನ, ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಸಾಧ್ಯ. ಇಂದು ಜ್ಞಾನವು ನಮ್ಮ ಬೆರಳುಗಳ ತುದಿಯಲ್ಲಿ ಇದೆ. ಯಾವ ಮಾಹಿತಿ ಯೋಗ್ಯವಾದದ್ದು ಅದನ್ನು ಆರಿಸಿಕೊಂಡು ವಿದ್ಯಾರ್ಥಿಗಳು ಯಶಸ್ಸನ್ನು ಗಳಿಸಿಕೊಳ್ಳಬೇಕು ಎಂದರು. ಒಂದೇ ದಿನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ .ಉತ್ತಮ ಹವ್ಯಾಸಗಳನ್ನು ಪ್ರತಿದಿನ ರೂಢಿಸಿಕೊಳ್ಳಬೇಕು.ಸದೃಡ ದೇಹದಲ್ಲಿ ಸದೃಢ ಮನಸ್ಸಿರುತ್ತದೆ. ಧನಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಬಿದ್ದಾಟಂಡಮುತ್ತಣ್ಣ,ಬೊಳ್ಳಚೆಟ್ಟಿರ ಸುರೇಶ್ ಪಾಲ್ಗೊಂಡಿದ್ದರು.ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳ 9 ತಂಡಗಳು ಪಾಲ್ಗೊಂಡಿದ್ದವು.

ಅಂತಿಮ ಸುತ್ತಿಗೆ ಐದು ತಂಡಗಳನ್ನು ಆಯ್ಕೆ ಮಾಡಲಾಯಿತು.ಕ್ಷಿಜ್ ಮಾಸ್ಟರ್ ಆಗಿ ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್..ಸುರೇಶ್ ಹಾಗೂ ಮಡಿಕೇರಿ ಬಿಆರ್ ಸಿ ಕೇಂದ್ರದ ಕಂಪ್ಯೂಟರ್ ಪ್ರೊಗ್ರಾಮರ್ ಡಿ.ಎಸ್.ಪ್ರಸಾದ್ ಪಾಲ್ಗೊಂಡಿದ್ದರು.ಶಿಕ್ಷಕರಾದ ಕಾಳಯ್ಯ,ಚಂದ್ರಕಲಾ,ಸ್ಮಿತಾ ರಸಪ್ರಶ್ನೆ ಸ್ಪರ್ಧೆಯನ್ನು ನಿರ್ವಹಿಸಿದರು. ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಬಿ.ಎಂ.ಶಾರದಾ ಸ್ವಾಗತಿಸಿದರು.ಶಿಕ್ಷಕಿಕೆ.ಎಸ್.ಶೋಭ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿಎಂ.ಎಸ್.ಭಾಗೀರಥಿ ವಂದಿಸಿದರು.