ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ: ನಾಪೋಕ್ಲು ಕೆಪಿಎಸ್ ಶಾಲೆಯ ಆಯಿಷತ್ ಶಂರೀನಾ ರಾಜ್ಯ ಮಟ್ಟಕ್ಕೆ ಆಯ್ಕೆ
admincoorgdaily
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ಪದವಿ ಪೂರ್ವ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಆಯಿಷತ್ ಶಂರೀನಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗೋಣಿಕೊಪ್ಪದ ಕಾಪ್ಸ್ ವಿದ್ಯಾಸಂಸ್ಥೆಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಶಂರೀನಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಮನಗರದಲ್ಲಿ ನಡೆಯುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಂರೀನಾ ಕೊಡಗು ಜಿಲ್ಲಾತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಮೇಲುಸ್ತುವಾರಿ ಸಮಿತಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.