ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಎಷ್ಟು ಮಿ.ಮೀ ಮಳೆಯಾಗಿದೆ ಗೊತ್ತೇ!
ಮಡಿಕೇರಿ:-ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 4.82 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.89 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2421.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2411.59 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.25 ಮಿ.ಮೀ. ಕಳೆದ ವರ್ಷ ಇದೇ ದಿನ 12.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3616.62 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3432.49 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2186.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2185.10 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.45 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.72 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2266.82 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2245.85 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.10 ಮ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2800.77 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2720.96 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1237.89 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1473.50 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-
ನಾಪೋಕ್ಲು 2.40, ಭಾಗಮಂಡಲ 2.60 , ವಿರಾಜಪೇಟೆ 1, ಅಮ್ಮತ್ತಿ 0.50, ಹುದಿಕೇರಿ 16.50, ಶ್ರೀಮಂಗಲ 16, ಪೊನ್ನಂಪೇಟೆ 1, ಬಾಳೆಲೆ 30, ಸೋಮವಾರಪೇಟೆ 13.60, ಶನಿವಾರಸಂತೆ 8, ಶಾಂತಳ್ಳಿ 30, ಕೊಡ್ಲಿಪೇಟೆ 3, ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (20-08-2025) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2857.35 ಅಡಿಗಳು. ಕಳೆದ ವರ್ಷ ಇದೇ ದಿನ 2857.61 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 0.00 ಮಿ.ಮೀ., ಇಂದಿನ ನೀರಿನ ಒಳಹರಿವು 4704 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1507 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 3083 ಕ್ಯುಸೆಕ್. ನಾಲೆಗೆ 4704 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 800 ಕ್ಯುಸೆಕ್. ನಾಲೆಗೆ 400 ಕ್ಯುಸೆಕ್.