ಕೊಡಗು ಜಿಲ್ಲೆಯಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ದಿನಾಂಕ ಗೊತ್ತೇ!

ಮಡಿಕೇರಿ :-2025-26 ನೇ ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಜಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ದೆಯನ್ನು ಇಲಾಖಾ ವತಿಯಿಂದ ಈ ದಿನಾಂಕ ಮತ್ತು ಸ್ಥಳಗಳಲ್ಲಿ ಏರ್ಪಡಿಸಲಾಗಿದ್ದು. ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಆಯಾಯ ತಾಲ್ಲೂಕು ಕ್ರೀಡಾಪಟುಗಳು ಭಾಗವಹಿಸಬಹುದು. ಮಡಿಕೇರಿ ತಾಲ್ಲೂಕಿಗೆ ಆಗಸ್ಟ್, 18 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ, ಸಾಯಿ ಹಾಕಿ ಟರ್ಫ್, ಮಡಿಕೇರಿ. ಪೊನ್ನಂಪೇಟೆ ತಾಲ್ಲೂಕಿಗೆ ಆಗಸ್ಟ್, 19 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯ ಹಾಗೂ ಪೊನ್ನಂಪೇಟೆ ಜೂನಿಯರ್ ಕಾಲೇಜು ಆಟದ ಮೈದಾನ ವಿರಾಜಪೇಟೆ ತಾಲ್ಲೂಕಿಗೆ ಆಗಸ್ಟ್ 20 ರಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಪೊನ್ನಂಪೇಟೆ ಜೂನಿಯರ್ ಕಾಲೇಜು ಆಟದ ಮೈದಾನ. ಕುಶಾಲನಗರ ತಾಲ್ಲೂಕಿಗೆ ಆಗಸ್ಟ್, 21 ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ ಹಾಗೂ ಸೈನಿಕ ಶಾಲೆ, ಕೂಡಿಗೆ ಹಾಗೂ ಸೋಮವಾರಪೇಟೆ ತಾಲ್ಲೂಕಿಗೆ ಆಗಸ್ಟ್, 22 ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ ಹಾಗೂ ಸೈನಿಕ ಶಾಲೆ ಇಲ್ಲಿ ಕ್ರೀಡಾಕೂಟ ನಡೆಯಲಿದೆ. ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಆಗಸ್ಟ್, 30 ರಂದು ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಮತ್ತು ಕೂಡಿಗೆ ಕ್ರೀಡಾ ಶಾಲೆ ಹಾಗೂ ಕೂಡಿಗೆ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕು ಮಟ್ಟದ ದಸರಾ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ದಸರಾ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಕೋರುತ್ತ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಮಡಿಕೇರಿ ತಾಲ್ಲೂಕು-ಮಹಾಬಲ 9980887499, ಮನು 9480032721, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವೆಂಕಟೇಶ್: 9844326007, ಹಾಗೂ ಮಂಜುನಾಥ್ 9342563014, ಮೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು; ಸುಬ್ಬಯ್ಯ: 8197790350 ಹಾಗೂ ಗಣಪತಿ: 8951287301 ನ್ನು ಸಂಪರ್ಕಿಸಬಹುದಾಗಿದೆ. ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.