ಹುಟ್ಟುಹಬ್ಬದ ಅಂಗವಾಗಿ ಕೇಕ್ ಕಟ್ ಮಾಡುವ ನೆಪದಲ್ಲಿ ನಡೆದದ್ದೇನು ಗೊತ್ತೇ!

ಹುಟ್ಟುಹಬ್ಬದ ಅಂಗವಾಗಿ ಕೇಕ್  ಕಟ್ ಮಾಡುವ ನೆಪದಲ್ಲಿ ನಡೆದದ್ದೇನು ಗೊತ್ತೇ!
ಸಾಂದರ್ಭಿಕ ಚಿತ್ರ

ನೆಲಮಂಗಲ: ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಟ್ಟುಹಬ್ಬದ ಆಚರಣೆ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. 

ಸಂತ್ರಸ್ತ ಬಾಲಕಿಯ ಹುಟ್ಟುಹಬ್ಬದ ಅಂಗವಾಗಿ ಕೇಕ್ ಕಟ್ ಮಾಡುವ ನೆಪದಲ್ಲಿ ಆರೋಪಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ಸಲ್ಲಿಸಿದ ದೂರು ತಿಳಿಸಿದೆ.

ಘಟನೆಯ ನಂತರ ಬಾಲಕಿ ಮನೆಗೆ ಬಂದು ವಿಷಯವನ್ನು ಕುಟುಂಬಕ್ಕೆ ತಿಳಿಸಿದ ತಕ್ಷಣವೇ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು, ಆರೋಪಿ ಯತೀಶ್‌ನ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.