ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆಯ ವೇಳೆ ಡೆಲಿವರಿ ಬಾಯ್ ಮಾಡಿದ್ದೇನು ಗೊತ್ತಾ!

Dec 29, 2025 - 00:01
 0  1.9k
ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆಯ ವೇಳೆ ಡೆಲಿವರಿ ಬಾಯ್ ಮಾಡಿದ್ದೇನು ಗೊತ್ತಾ!
Photo credit: TV09 (ಬಂಧಿತ ಆರೋಪಿ)

ಬೆಂಗಳೂರು, ಡಿ. 28: ನಗರದ ಮಾಲ್ ವೊಂದರಲ್ಲಿ ಕ್ರಿಸ್‌ಮಸ್ ಆಚರಣೆ ನಡೆಯುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಡೆಲಿವರಿ ಬಾಯ್‌ ನನ್ನು ಪೊಲೀಸರು ಬಂಧಿಸಿದ್ದಾರೆ.

ಗುವಾಹಟಿ ಮೂಲದ ಮನೋಜ್ (27) ಬಂಧಿತ ಆರೋಪಿ. ಡಿ. 25ರಂದು ಮಾಲ್‌ ನಲ್ಲಿ ನಡೆದ ಕ್ರಿಸ್‌ಮಸ್ ಸಂಭ್ರಮದ ಸಂದರ್ಭ ಯುವತಿಯ ಖಾಸಗಿ ಅಂಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಘಟನೆಯಿಂದ ಅಸಹಜ ಸ್ಥಿತಿಗೆ ಒಳಗಾದ ಯುವತಿ ಕೂಡಲೇ ಸ್ಥಳದಲ್ಲೇ ಇದ್ದ ಮಹದೇವಪುರ ಪೊಲೀಸ್ ಠಾಣೆಯ ಸಿಬ್ಬಂದಿಗೆ ದೂರು ನೀಡಿದ್ದಾರೆ.

ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಜಾರಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಗರಾದ್ಯಂತ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

What's Your Reaction?

Like Like 3
Dislike Dislike 0
Love Love 0
Funny Funny 1
Angry Angry 0
Sad Sad 3
Wow Wow 2