State News

ಕೆಲಸದಿಂದ ತೆಗೆದ ಸಿಟ್ಟಿಗೆ ಕಾರ್ಮಿಕ ಮಾಡಿದ್ದೇನು ಗೊತ್ತೇ!

admincoorgdaily

ಆರೋಪಿ ಹನುಮಂತಪ್ಪ

ಬೆಂಗಳೂರು, (ಮಾರ್ಚ್ 31): ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್​​​ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ (Bengaluru) ತಿಗಳರಪಾಳ್ಯದಲ್ಲಿ ನಡೆದಿದೆ.

 ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್(38) ಹತ್ಯೆಯಾದ ವ್ಯಕ್ತಿ. ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಉದ್ಯೋಗಿ ಯಾದಗಿರಿ ಮೂಲದ ಹನುಮಂತಪ್ಪ, ನಿನ್ನೆ (ಮಾರ್ಚ್ 30) ಮ್ಯಾನೇಜರ್ ರಾಹುಲ್ ಗೆ ಚಾಕುವಿನಿಂದ ಇರಿದಿದ್ದ.

 ಇದರಿಂದ ಗಾಯಗೊಂಡ ರಾಹುಲ್​ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮ್ಯಾನೇಜರ್ ರಾಹುಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಾದಗಿರಿ ಮೂಲದ ಹನುಮಂತಪ್ಪ ಎನ್ನುವಾತ ಬೆಂಗಳೂರಿನ ತಿಗಳರಪಾಳ್ಯದಲ್ಲಿರುವ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಎನ್ನುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

 ಆದ್ರೆ, ಏಕಾಏಕಿ ಹನುಮಂತಪ್ಪನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಇದರಿಂದ ಕೋಪಗೊಂಡ ಹನುಮಂತಪ್ಪ, ನಿನ್ನೆ(ಮಾರ್ಚ್ 30) ಕಂಪನಿಯಲ್ಲಿದ್ದ ಮ್ಯಾನೇಜರ್ ರಾಹುಲ್​​ಗೆ ಸುಮಾರು 10 ಬಾರಿ ಚಾಕುವಿನಿಂದ ಇರಿದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ರಾಹುಲ್, ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ದುರದೃಷ್ಟವಶಾತ್, ಚಿಕಿತ್ಸೆ ಫಲಿಸದೇ ಮ್ಯಾನೇಜರ್ ರಾಹುಲ್ ಮಂಗಳವಾರ ಮೃತಪಟ್ಟಿದ್ದಾರೆ.

ಮೃತ ರಾಹುಲ್ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸದ್ಯ ರಾಜಗೋಪಾಲ್ ನಗರ ಪೊಲೀಸರು, ಯಾದಗಿರಿ ಮೂಲಕದ ಆರೋಪಿ ಹನುಮಂತಪ್ಪನನ್ನ ಬಂಧಿಸಿದ್ದಾರೆ