ಡಾ. ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ: ಆ.27ರಂದು ಸಂಸದ ಯದುವೀರ್ ಒಡೆಯರ್ ನೇತೃತ್ವದಲ್ಲಿ ಅಭಿಪ್ರಾಯ ಸಂಗ್ರಹ ಸಭೆ
admincoorgdaily

ಮಡಿಕೇರಿ: ಡಾ. ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಕೇಂದ್ರಕ್ಕೆ ಆಕ್ಷೇಪಣೆ ಸಲ್ಲಿಸಲು ಆ.27ರಂದು ಹೋಟೆಲ್ ರಾಜದರ್ಶನ್ ನಲ್ಲಿ ಸಭೆ ಕರೆಯಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ತಿಳಿಸಿದರು.
60 ದಿನಗಳೊಳಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಅವಕಾಶ ನೀಡಿದ್ದು, ಸಂಸದ ಯದುವೀರ್ ಒಡೆಯರ್ ನೇತೃತ್ವದಲ್ಲಿ ಅಭಿಪ್ರಾಯ ಸಂಗ್ರಹಿಸಲಾಗುವುದು. ರಾಜ್ಯ ಸರ್ಕಾರ ವರದಿ ರದ್ದು ಮಾಡಿರುವುದು ಸ್ವಾಗತಾರ್ಹ, ಆದರೆ ಅನುಷ್ಠಾನ ಆಗಬೇಕು ಎಂದರು.ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ ನಡೆಸಿ ರೈತರು, ಬೆಳೆಗಾರರು, ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು. ಕೇರಳ ಮಾದರಿಯಲ್ಲಿ ಜಂಟಿ ಸಮೀಕ್ಷೆ ನಡೆಸಿ ಕೃಷಿ ಭೂಮಿ, ಜನವಸತಿಯನ್ನು ESA ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಉಪಾಧ್ಯಕ್ಷ ಅಶ್ವಿನಿ ಸತೀಶ್, ಪ್ರದಾನ ಕಾರ್ಯದರ್ಶಿ ಮಹೇಶ್ ಜೈನಿ, ಪ್ರಮುಖರಾದ ರವಿಕುಶಾಲಪ್ಪ, ನಾಗೇಶ್, ಸುವಿನ್ ಗಣಪತಿ, ಇದ್ದರು.