ಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ ವೆಚ್ಚದ ಕಾಮಗಾರಿ ಗಳನ್ನು ಲೋಕಾರ್ಪಣೆ ಮಾಡಿದ ಡಾ ಮಂತರ್ ಗೌಡ

Jul 21, 2026 - 17:13
 0  73
ಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ ವೆಚ್ಚದ ಕಾಮಗಾರಿ ಗಳನ್ನು ಲೋಕಾರ್ಪಣೆ ಮಾಡಿದ ಡಾ ಮಂತರ್ ಗೌಡ

ಮಡಿಕೇರಿ:ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ ವೆಚ್ಚದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು.

ಜೇನುಕಲ್ಲು ಬೆಟ್ಟ ಭುವನ ಗಿರಿ ಗ್ರಾಮದಲ್ಲಿ 44.60 ವೆಚ್ಚದ ಕಾಂಕ್ರೀಟ್ ರಸ್ತೆ,ಸೀಗೆ ಹೊಸೂರು ಕಾಲೋನಿಯಲ್ಲಿ 25.5 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ, ಹಾಗೂ ಹುಣಸೆಪಾರೆ ಪರಿಶಿಷ್ಟ ಪಂಗಡದ ಕಾಲೋನಿಗೆ 30 ಲಕ್ಷ ರೂಗಳ ಕಾಂಕ್ರೀಟ್ ಕಾಮಗಾರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳಿಂದ ಬಹಳ ಹಿಂದಿನಿಂದಲೂ ವಂಚಿತರಾಗಿರುವ ನಾಗರೀಕರು ಹಲವಾರು ಬೇಡಿಕೆಗಳನ್ನು ಸಲ್ಲಿಸುತ್ತಿದ್ದು ಎಲ್ಲವನ್ನೂ ಹಂತ ಹಂತವಾಗಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಅಕ್ರಮ ಸಕ್ರಮ ಅರ್ಜಿದಾರರು ತಮ್ಮ ಜಮೀನು ಸಕ್ರಮಕ್ಕೆ ಸಂಭಂದಿಸಿದಂತೆ ಯಾರಿಗೂ ಒಂದು ರುಪಾಯಿ ಕೂಡ ನೀಡಬಾರದು ಎಂದು ಮನವಿ ಮಾಡಿದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ವಲಯ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಅನಂತ್,ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ,ಮಾಜಿ ಪಂಚಾಯತ್ ಸದಸ್ಯರಾದ ಚಂದ್ರ, ಗುತ್ತಿಗೆದಾರರಾದ ಕುಮಾರ್, ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0