ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದ ರೋಗಿಯ ಆರೋಗ್ಯ ವಿಚಾರಿಸಿದ ಡಾ.ಮಂತರ್ ಗೌಡ
ಸೋಮವಾರಪೇಟ:ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೆಕಟ್ಟೆ ರಸ್ತೆಯ ರಮೇಶ್ ಎಂಬುವವರು ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಡಾ.ಮಂತರ್ ಗೌಡ ರವರು ರಮೇಶ್ ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿ ಆರೋಗ್ಯವನ್ನು ವಿಚಾರಿಸಿ ಧನ ಸಹಾಯವನ್ನು ಮಾಡಿದರು. ಈ ಸಂದರ್ಭದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಖಜಾಂಚಿ ಚೇತನ್ ಸಿಇ, ಚೌಡ್ಲು ಗ್ರಾಮ ಪಂಚಾಯತಿ ಸದಸ್ಯ ಚೇತನ್ ಎಸ್ ಐ, ಸೋಮವಾರಪೇಟೆ ಬ್ಲಾಕ್ ಯೂಥ್ ಕಾಂಗ್ರೆಸ್ ಅಧ್ಯಕ್ಷ ಡಿಯು ಕಿರಣ್, ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ವಿನೋದ್ ರವರು ಉಪಸ್ಥಿತರಿದ್ದರು.