ಕೊಡಗು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಡಾ. ನಗ್ಮಾಭಾನು ಹೆಚ್.ಎ. ಅವರಿಗೆ ಯುವ ಮಹಿಳಾ ಸಂಶೋಧಕಿ ಪ್ರಶಸ್ತಿ

Dec 24, 2025 - 18:52
Dec 25, 2025 - 10:17
 0  610
ಕೊಡಗು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಡಾ. ನಗ್ಮಾಭಾನು ಹೆಚ್.ಎ. ಅವರಿಗೆ ಯುವ ಮಹಿಳಾ ಸಂಶೋಧಕಿ ಪ್ರಶಸ್ತಿ

ಮಡಿಕೇರಿ: ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಅಡ್ವಾನ್ಸ್‌ಡ್ ಸೈನ್ಸಸ್‌ನಲ್ಲಿ ಡಿಸೆಂಬರ್ 22 ರಿಂದ 24 ರವರೆಗೆ 2025 ರಂದು ನಡೆದ ಭಾರತೀಯ ರಸಾಯನಶಾಸ್ತ್ರಜ್ಞರ ಮಂಡಳಿಯ 44 ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಸಾವಯವ ರಸಾಯನಶಾಸ್ತ್ರ ವಿಭಾಗದಲ್ಲಿ ತಮ್ಮ ಪ್ರಬಂಧದ ಅತ್ಯುತ್ತಮ ಮೌಖಿಕ ಪ್ರಸ್ತುತಿಗಾಗಿ ಪ್ರೊ. ಡಿ. ಅಶೋಕ್ ಮತ್ತು ಡಾ. ಎಂ. ಸರಸಿಜಾ ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಈ ಹಿಂದೆಯೂ ಸಹ ಸಾವಯವ ರಸಾಯನಶಾಸ್ತ್ರ ವಿಷಯದಲ್ಲಿ ಯುವ ಮಹಿಳಾ ಸಂಶೋಧಕಿ ಪ್ರಶಸ್ತಿ ಪಡೆದುಕೊಂಡಿದ್ದರು. ಎರಡನೇ ಬಾರಿ ಈ ಯುವ ಮಹಿಳಾ ಸಂಶೋಧಕಿ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ತಮ್ಮ ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. 

ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಅಬ್ಬಾಸ್ ಮತ್ತು ನಸ್ರೀನ್ ದಂಪತಿಗಳ ಸುಪುತ್ರಿಯಾಗಿರುವ ಡಾ. ನಗ್ಮಾಭಾನು ಹೆಚ್. ಎ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿಯಲ್ಲಿನ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಬಾಲಕೃಷ್ಣ ಕಲ್ಲೂರಾಯ ಅವರ ಮಾರ್ಗದರ್ಶನದಲ್ಲಿ "ಸಿಂಥೆಸಿಸ್ ಆಫ್ ಸಮ್ ನೋವೆಲ್ ಹೆಟಾರಿಸೈಕ್ಲಿಕ್ ಕಾಂಪೌಂಡ್ಸ್ ವಯಾ ಡಯಪೊಲರ್ ಸೈಕ್ಲೋಡಿಷನ್ ರಿಯಾಕ್ಷನ್ಸ್" ಎಂಬ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. 

ಪ್ರಸ್ತುತ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಮುಖ್ಯ ಆವರಣದಲ್ಲಿರುವ ರಸಾಯನಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0