ಡಾ. ವಿಜಯಲತ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ
admincoorgdaily
ಮಡಿಕೇರಿ : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ನೀಡಲಾಗುವ 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಗ್ರಂಥಪಾಲಕಿ ಡಾ. ವಿಜಯಲತ ಸಿ ಅವರು ಭಾಜನರಾಗಿದ್ದಾರೆ.
ಗ್ರಂಥಾಲಯದ ಡಿಜೀಟಲೀಕರಣ, ಇ-ಬುಕ್ ವ್ಯವಸ್ಥೆ, ಆನ್ಲೈನ್ ಕಾಟ್ ಲಾಗ್ , ಇ-ಲರ್ನಿಂಗ್ ಹಾಗೂ ವಿದ್ಯಾರ್ಥಿಗಳಿಗೆ ದೈನಂದಿನ ಬಳಕೆಗೆ ಸುಲಭವಾದ ವ್ಯವಸ್ಥೆಗಳನ್ನು ಹಾಗೂ ವಿದ್ಯಾರ್ಥಿಗಳಲ್ಲಿ ಓದಿನ ಮಹತ್ವವವನ್ನು ಅರ್ಥ ಮಾಡಿಸಲು ಕಾರ್ಯಗಾರ ಹೀಗೆ ಶಿಕ್ಷಣಕ್ಕೆ ಬೇಕಾದ ಸಾಕಷ್ಟು ಸಂಪನ್ಮೂಲಗಳನ್ನು ವಿದ್ಯಾರ್ಥಿ ಓದುಗರಿಗೆ ಒದಗಿಸುವ ಕೆಲಸ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಇತ್ತೀಚೆಗೆ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರೇರಣಾ ದಿವಸ್ 2025 ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಡಾ. ವಿಜಯಲತ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.