ಡಾ. ಜ಼ಮೀರ್ ಅಹಮದ್ ಅವರಿಗೆ ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ
ಮೈಸೂರು:ಇಲ್ಲಿನ ಜಿಲ್ಲಾ ಸಾಹಿತ್ಯ ಭವನ, ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು, ಸಾವಿತ್ರಿಬಾಯಿ ಬಾಪುಲೆ ಟ್ರಸ್ಟ್ (ರಿ), ಮೈಸೂರು ಹಾಗೂ ಸಾವಿತ್ರಿಬಾಯಿ ವೃದ್ಧಾಶ್ರಮ, ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕಲೆ, ಸಾಹಿತ್ಯ, ಶಿಕ್ಷಣ, ವೈದ್ಯಕೀಯ, ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸಿದ ಸಾಧಕರಿಗೆ ಅವರ ಸಾಧ್ಯತೆಯನ್ನು ಜಗತ್ತಿಗೆ ಪರಿಚಯಿಸಿ, ಅಭಿನಂದಿಸಿ, ಪ್ರೋತ್ಯಾಹಿಸಿ ಸಾಧನೆಗೆ ಪ್ರೇರಣೆಯಾಗುವ ನಿಟ್ಟಿನಲ್ಲಿ ಕೊಡ ಮಾಡುವ 'ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ'ಯನ್ನು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಹಾಗೂ ನಾಡೋಜ ಡಾ||ಎಸ್.ಕೆ. ಕರೀಂಖಾನ್ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಡಾ.ಜ಼ಮೀರ್ ಅಹಮದ್ ಅವರಿಗೆ ನೀಡಿ ಗೌರವಿಸಿದೆ.
