ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Jan 5, 2026 - 12:14
 0  245
ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಮಡಿಕೇರಿ:ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನೇದಿನೇ ತೀವ್ರವಾಗಿ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ, ಗ್ರಾಮ ಪಂಚಾಯತ್ ಸದಸ್ಯರಾದ ಪಿ.ಎಲ್. ಸುರೇಶ್ ಅವರು ಸಂಪಾಜೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಜನಸಾಮಾನ್ಯರ ಮೂಲಭೂತ ಅಗತ್ಯವಾದ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ಈ ಹೋರಾಟವನ್ನು ಅವರು ಕೈಗೊಂಡಿದ್ದು, ನೀರಿನ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ಗ್ರಾಮಸ್ಥರ ಪರವಾಗಿ ಈ ಸತ್ಯಾಗ್ರಹ ನಡೆಯುತ್ತಿದೆ ಎಂದು ಸುರೇಶ್ ಅವರು ತಿಳಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಂಚಾಯತ್ ಆಡಳಿತ ಕೂಡಲೇ ಎಚ್ಚೆತ್ತು, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಹಾಗೂ ಸಮರ್ಪಕ ಪರಿಹಾರ ಒದಗಿಸಬೇಕೆಂದು ಪಿ.ಎಲ್. ಸುರೇಶ್ ಅವರು ಆಗ್ರಹಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0