ಇತಿಹಾಸ ಪ್ರಸಿದ್ದ ಕುಂಜಿಲ ಪೈನರಿ ಮಖಾಂ ಉರೂಸ್ ಗೆ ಚಾಲನೆ

Mar 28, 2026 - 00:13
 0  161
ಇತಿಹಾಸ ಪ್ರಸಿದ್ದ ಕುಂಜಿಲ ಪೈನರಿ ಮಖಾಂ ಉರೂಸ್ ಗೆ  ಚಾಲನೆ

ವರದಿ:ಝಕರಿಯ ನಾಪೋಕ್ಲು 

ನಾಪೋಕ್ಲು :ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಕುಂಜಿಲ ಪೈನರಿ ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾಹಿ ಅವರ ಹೆಸರಿನಲ್ಲಿ ಆಚರಿಸಿಕೊಂಡು ಬರುತ್ತಿರುವ ವಾರ್ಷಿಕ ಉರೂಸ್ ಸಮಾರಂಭಕ್ಕೆ ಗಣ್ಯರು ಶ್ರದ್ಧಾ ಭಕ್ತಿಯ ಚಾಲನೆ ನೀಡಿದರು.

ಶುಕ್ರವಾರ ಜುಮಾ ನಮಾಜಿನ ಬಳಿಕ ದರ್ಗಾಗೆ ತೆರಳಿದ ಸಮುದಾಯ ಬಾಂಧವರು ಜಮಾಅತ್ ಖತೀಬರಾದ ನಿಝಾರ್ ಅಹ್ಸನಿ ಕಕ್ಕಡಿಪುರಂ ಅವರ ನೇತೃತ್ವದಲ್ಲಿ ಮಖಾಂ ಝಿಯಾರತ್ ಹಾಗೂ ವಿಶೇಷ ಪ್ರಾರ್ಥನೆ ನೆರವೇರಿಸಿದರು. ಕುಂಜಿಲ ಪೈನರಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಅಧ್ಯಕ್ಷ ಎಂ.ಎ.ಶೌಕತ್ ಅಲಿ ಧ್ವಜಾರೋಹಣ ನೆರವೇರಿಸಿದರು.

ಉರೂಸ್ ಸಮಾರಂಭವು ಮಾ.31ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೋಂದಿಗೆ ಜರುಗಲಿದ್ದು ಮಾ.30ರಂದು ಸೋಮವಾರ ಮಧ್ಯಾಹ್ನ ಸರ್ವಧರ್ಮ ಸಮ್ಮೇಳನ ನಡೆಯಲಿದೆ.ಅಂದು ಸಂಜೆ 4.ಗಂಟೆಗೆ ಮಸೀದಿಯಲ್ಲಿ ಮೌಲೂದ್ ಪಾರಾಯಣ ಹಾಗೂ ಭಕ್ತಾಧಿಗಳಿಗೆ ಅನ್ನದಾನ ಕಾರ್ಯಕ್ರಮ ನೆರವೇರಲಿದೆ.

ಈ ಸಂದರ್ಭ ಜಮಾಅತ್ ಉಪಾಧ್ಯಕ್ಷರಾದ ವಿ.ಎ.ಅಬ್ದುಲ್ ರಾಹ್ಮಾನ್,ಪ್ರಧಾನ ಕಾರ್ಯದರ್ಶಿ ಸಹೀದ್ ಪಯ್ಯಡತ್ ,ಕೋಶಾಧಿಕಾರಿ ಕುಂಡಂಡ ಹಂಝ, ದರ್ಸ್ ರಿಲೀಫ್ ಸಮಿತಿ ಅಧ್ಯಕ್ಷ ತರ್ಮಲ್ ಹಂಝ, ಉಪಾಧ್ಯಕ್ಷ ರಶೀದ್ ಮಕ್ಕಿ, ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ ಕುಂಜಿಲ,ಜಮಾಅತ್ ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು,ಸಲಹಾ ಸಮಿತಿ ಸದಸ್ಯರು,ಜಮಾಅತ್ ಆಡಳಿತ ಮಂಡಳಿ ಪದಾಧಿಕಾರಿಗಳು, ಜಮಾಅತ್ ನ ಸರ್ವ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು .

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0