Kodagu

ಚಾಲಕನ ನಿಯಂತ್ರಣ ತಪ್ಪಿ ಕೊಯನಾಡು ಬಳಿ ಚರಂಡಿಗೆ ಪಲ್ಟಿಯಾದ ಕಾರು

admincoorgdaily

ಚಾಲಕನ ನಿಯಂತ್ರಣ ತಪ್ಪಿ ಕೊಯನಾಡು ಬಳಿ ಚರಂಡಿಗೆ ಪಲ್ಟಿಯಾದ ಕಾರು

ಮಡಿಕೇರಿ: ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಯನಾಡು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.

 ಸುಳ್ಯದಿಂದ ಮಡಿಕೇರಿಯತ್ತ ತೆರಳುತ್ತಿದ್ದ ಕಾರು ಕೊಯನಾಡು ಅರಣ್ಯ ಇಲಾಖೆಯ ಪಕ್ಕದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಯ ಬರೆಗೆ ಡಿಕ್ಕಿ ಹೊಡೆದಿದೆ.

ಬಳಿಕ ಕಾರು ತಲೆಕೆಳಗಾಗಿ ಚರಂಡಿಗೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.