ಕುಡಿದ ಅಮಲಿನಲ್ಲಿ ಹೆಂಡತಿಯನ್ನೇ ಹತ್ಯೆಗೈದ ಪತಿ

ಕುಡಿದ ಅಮಲಿನಲ್ಲಿ ಹೆಂಡತಿಯನ್ನೇ ಹತ್ಯೆಗೈದ ಪತಿ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ಚಾಕುವಿನಿಂದ ಇರಿದು ಪತ್ನಿಯನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ರೇಖಾ (38) ಮೃತರು. ಅವರ ಗಂಡ ರಘು (40) ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ರಘು ಪ್ರತಿನಿತ್ಯ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ನಿನ್ನೆ ರಾತ್ರಿ ಮನೆಯಲ್ಲಿದ್ದ ಇಬ್ಬರು ಗಂಡು ಮಕ್ಕಳು ಟ್ಯೂಷನ್‌ಗೆ ತೆರಳಿದ್ದ ವೇಳೆ, ಮದ್ಯದ ಅಮಲಿನಲ್ಲಿ ಮನೆಗೆ ಬಂದ ರಘು ಪತ್ನಿಯೊಂದಿಗೆ ಜಗಳವಾಡಿ, ಮನೆಯಿಂದ ಹೊರಗೆ ಎಳೆದು ಚಾಕುವಿನಿಂದ ಎದೆಗೆ ಇರಿದು ಸ್ಥಳದಲ್ಲೇ ಹತ್ಯೆಗೈದಿದ್ದಾನೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ರಘು ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಿರೀಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.