Kodagu

ಮಡಿಕೇರಿಯಲ್ಲಿ ಜೂ. 28ಕ್ಕೆ ಈಡಿಗ ನೌಕರರ ಸಂಘ ಉದ್ಘಾಟನೆ, ಪ್ರತಿಭಾ ಪುರಸ್ಕಾರ

admincoorgdaily

ಮಡಿಕೇರಿಯಲ್ಲಿ ಜೂ. 28ಕ್ಕೆ ಈಡಿಗ ನೌಕರರ ಸಂಘ ಉದ್ಘಾಟನೆ, ಪ್ರತಿಭಾ ಪುರಸ್ಕಾರ

ಮಡಿಕೇರಿ, ಜೂ. 26: ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು, ಇದರ ಕೊಡಗು ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಇದೇ ಜೂ. 28, ಭಾನುವಾರ ಬೆಳಿಗ್ಗೆ 10:30ಕ್ಕೆ ಮಡಿಕೇರಿಯ ರಾಜದರ್ಶನ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕುಮಾರ್ ವಹಿಸಲಿದ್ದಾರೆ. ಘಟಕವನ್ನು ಕರ್ನಾಟಕ ರಾಜ್ಯ ಈಡಿಗ ನೌಕರರ ಸಂಘದ ಅಧ್ಯಕ್ಷ ಎಂ. ಶ್ರೀನಿವಾಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಚಲನಚಿತ್ರ ನಿರ್ದೇಶಕ ಹಾಗೂ ಆಪ್ತ ಸಮಾಲೋಚಕ ಸ್ಮಿತೇಶ್ ಎಸ್. ಬಾರ್ಯ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಬಿಲ್ಲವ ಸಮಾಜ ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಪೂಜಾರಿ, ಕೊಡಗು ಎಸ್‌ಎನ್‌ಡಿಪಿ ಅಧ್ಯಕ್ಷ ವಿ.ಕೆ. ಲೋಕೇಶ್, ವಿರಾಜಪೇಟೆ ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಸೋಮವಾರಪೇಟೆ ತಾಲೂಕು ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಚಂದ್ರಹಾಸ್, ಮಡಿಕೇರಿ ಬಿಲ್ಲವ ಸಮಾಜ ಅಧ್ಯಕ್ಷೆ ಲೀಲಾವತಿ, ಕೊಡಗು ಬಿಲ್ಲವ ಸಮಾಜ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕರ್ಕೇರ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.