ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ:ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

Jul 25, 2026 - 20:50
 0  151
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ:ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

ನವದೆಹಲಿ: ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ. ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದಾರೆ.

 ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಇಂದು ಸಂಜೆ ಪ್ರಕಟಣೆ ಹೊರಡಿಸಿದೆ. ಪ್ರಕಟಣೆಯ ಪ್ರಕಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.ಪ್ರಸ್ತುತ ಜೋಶಿ ಅವರು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆಯೂ ನೀಡಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0