ಶೈಕ್ಷಣಿಕ ಹಾಗೂ ಸಾಮಾಜಿಕ ಆರ್ಥಿಕ ಜನಗಣತಿ:ವೀರಶೈವ ಲಿಂಗಾಯಿತ ಎಂದು ದಾಖಲಿಸಲು ಮನವಿ

ಮಡಿಕೇರಿ: ರಾಜ್ಯ ಸರ್ಕಾರದ ವತಿಯಿಂದ ಸೆ22 ರಿಂದ ಅ12 ರವರೆಗೆ ಹಿಂದುಳಿದ ಆಯೋಗದಿಂದ ನಡೆಯುವ ಜನತೆಯ ಶೈಕ್ಷಣಿಕ ಹಾಗೂ ಸಾಮಾಜಿಕ, ಆರ್ಥಿಕ ಜನಗಣತಿಯ ಸಮಯದಲ್ಲಿ ವೀರಶೈವ ಲಿಂಗಾಯಿತ ಸಮುದಾಯದವರು ವೀರಶೈವ ಲಿಂಗಾಯಿತ ಎಂದು ದಾಖಲಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ವಿ.ಶಿವಪ್ಪ ಮನವಿ ಮಾಡಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮೀಕ್ಷೆ ಅನುಸೂಚಿಯ ೮ರ ಧರ್ಮದ ಕಾಲಂನಲ್ಲಿ ನೀಡಿರುವ ೧೧ನೇ ಕೋಡ್‌ನ ಇತರೆ ಎಂದಿರುವ ಸ್ಥಳದಲ್ಲಿ ವೀರಶೈವ ಲಿಂಗಾಯಿತ ಎಂದು ಮತ್ತು ೯ರ ಜಾತಿ ಕಾಲಂನಲ್ಲಿ ಲಿಂಗಾಯಿತ ಅಥವಾ ವೀರಶೈವ ಎಂದು ನಿಗದಿತ ಸಂಖ್ಯೆಯನ್ನು ನೀಡಿ ನಮೂದಿಸಬೇಕು. ೧೦ರ ಉಪಜಾತಿ ಕಾಲಂನಲ್ಲಿ ತಮ್ಮ ಉಪಜಾತಿಗಳನ್ನು ಕೋಡ್ ಸಮೇತ ದಾಖಲಿಸಿ ಮಾಹಿತಿ ನೀಡಬೇಕು
. ಸರ್ಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಸಂದರ್ಭ ಜಾತಿಗಣತಿಯ ದತ್ತಾಂಶಗಳನ್ನು ಉಪಯೋಗಿಸಿಕೊಳ್ಳುಲು ಅನುಕೂಲವಾಗುತ್ತದೆ. ಈ ಹಿನ್ನೆಲೆ ವೀರಶೈವ ಲಿಂಗಾಯಿತ ಸಮುದಾಯದವರು ನಿಖರ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಹಾಸಭಾ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಮೂರ್ತಿ, ಖಜಾಂಚಿ ಎಚ್.ಪಿ.ಉದಯಕುಮಾರ್, ಪ್ರಮುಖರಾದ ಎಂ.ಎಸ್.ಗಣೇಶ್, ಬಿ.ವಿ.ಬಸವರಾಜ್ ಇದ್ದರು.