Kodagu

ಆನೆ ದಾಳಿ ಪ್ರಕರಣ; ಸದನದಲ್ಲಿ ಪ್ರಸ್ತಾಪಿಸಲು ಎ.ಎಸ್. ಪೊನ್ನಣ್ಣಗೆ ಅವಕಾಶ

admincoorgdaily

ಆನೆ ದಾಳಿ ಪ್ರಕರಣ; ಸದನದಲ್ಲಿ ಪ್ರಸ್ತಾಪಿಸಲು ಎ.ಎಸ್. ಪೊನ್ನಣ್ಣಗೆ ಅವಕಾಶ

ಸಿದ್ದಾಪುರ: ಸಮೀಪ ಕಾಡಾನೆ ದಾಳಿಗೆ ಕಾರ್ಮಿಕ ಪಶ್ಚಿಮ ಬಂಗಾಳದ ಪುರುಲಿಯಾ ಮೂಲದ ಗೋಪಾಲ್ ಬಾವೂರಿ (44) ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕ ಜಾದವ್ ಗಂಭೀರವಾಗಿ ಗಾಯಗೊಂಡಿರುವ ಪ್ರಕರಣ ಸೇರಿದಂತೆ ಕೊಡಗಿನಲ್ಲಿ ನಿರಂತರವಾಗಿ ನಡೆಯುತ್ತಿರುವ ವನ್ಯಜೀವಿ ಮಾನವ ಸಂಘರ್ಷದ ಕುರಿತು ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲು ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಅವಕಾಶ ದೊರೆತಿದೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಸೋಮವಾರ ವನ್ಯಜೀವಿ–ಮಾನವ ಸಂಘರ್ಷದ ಕುರಿತು ಸದನದಲ್ಲಿ ಪ್ರಸ್ತಾಪಿಸಲು ಅವಕಾಶ ಕೋರಿ ಸಭಾಧ್ಯಕ್ಷರಿಗೆ ಪತ್ರ ಸಲ್ಲಿಸಿದ್ದರು ಇದಕ್ಕೆ ಸಭಾಧ್ಯಕ್ಷರು ಅನುಮತಿ ನೀಡಿದ್ದಾರೆ.

 ಕೊಡಗಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ಸೇರಿದಂತೆ ವನ್ಯಜೀವಿಗಳ ಹಾವಳಿಯಿಂದ ಜನರು ಎದುರಿಸುತ್ತಿರುವ ಸಮಸ್ಯೆಯನ್ನು ಸದನದ ಗಮನಕ್ಕೆ ತರಲು ಪೊನ್ನಣ್ಣ ಅವರಿಗೆ ಅವಕಾಶ ದೊರೆತಿದೆ ಮಾನವ ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕಾದ ಅಗತ್ಯದ ಕುರಿತು ಸದನದಲ್ಲಿ ಪ್ರಸ್ತಾಪಿಸುವುದಾಗಿ ಅವರು ತಿಳಿಸಿದ್ದಾರೆ