ಲಂಚ ಸ್ವೀಕರಿಸುತ್ತಿದ್ದ ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ವಿಶೇಷಾಧಿಕಾರಿ ಬಂಧನ

Oct 6, 2025 - 00:58
 0  495
ಲಂಚ ಸ್ವೀಕರಿಸುತ್ತಿದ್ದ ಇಂಧನ ಸಚಿವ ಕೆ.ಜೆ ಜಾರ್ಜ್ ಅವರ  ವಿಶೇಷಾಧಿಕಾರಿ ಬಂಧನ

ಬೆಂಗಳೂರು, ಅ. 5: ವಿದ್ಯುತ್ ಸಂಪರ್ಕಕ್ಕಾಗಿ ಅನುಮತಿ (ಎನ್‌ಒಸಿ) ನೀಡುವ ವೇಳೆ ಲಂಚ ಸ್ವೀಕರಿಸುತ್ತಿದ್ದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷಾಧಿಕಾರಿ ಸೇರಿದಂತೆ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

 ಲೋಕಾಯುಕ್ತ ಮೂಲಗಳ ಪ್ರಕಾರ, ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಜ್ಯೋತಿ ಪ್ರಕಾಶ್ ಹಾಗೂ ಅವರ ಕಾರು ಚಾಲಕ ನವೀನ್ ಅವರನ್ನು 50 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬಲೆಗೆ ಬಿದ್ದಾದ್ದಾರೆ.

 ಬ್ಯಾಡರಹಳ್ಳಿಯ ನಿವಾಸಿ ಕೆ.ಎಂ. ಅನಂತರಾಜು ಅವರು ಬಡಾವಣೆ ನಿರ್ಮಾಣ ಕಾಮಗಾರಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಎನ್‌ಒಸಿ ನೀಡುವ ಹಿನ್ನೆಲೆಯಲ್ಲಿ ಜ್ಯೋತಿ ಪ್ರಕಾಶ್ ಅವರು 1 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅನಂತರಾಜು ಅವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ಅವರ ನೇತೃತ್ವದ ತಂಡ, 50 ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಇಬ್ಬರನ್ನೂ ಬಂಧಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ಮುಂದಿನ ತನಿಖೆ ಮುಂದುವರೆಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0