ಹಾಕತ್ತೂರಿನಲ್ಲಿ ಪರಿಸರ ದಿನಾಚರಣೆ: ತೊಂಬತ್ತು ಮನೆ ಶಾಲೆ, ಸ್ಮಶಾನದಲ್ಲಿ ಸಸಿ ನೆಡುವ ಕಾರ್ಯಕ್ರಮ

Jun 14, 2026 - 12:59
 0  250
ಹಾಕತ್ತೂರಿನಲ್ಲಿ ಪರಿಸರ ದಿನಾಚರಣೆ: ತೊಂಬತ್ತು ಮನೆ ಶಾಲೆ, ಸ್ಮಶಾನದಲ್ಲಿ ಸಸಿ ನೆಡುವ ಕಾರ್ಯಕ್ರಮ

ಮಡಿಕೇರಿ:ಪರಿಸರ ದಿನಾಚರಣೆಯ ಅಂಗವಾಗಿ ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಬತ್ತು ಮನೆಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.

 ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ಕೊಡಗು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಹಾಕತ್ತೂರು ಗ್ರಾಮ ಪಂಚಾಯಿತಿ, ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ತ್ರಿನೇತ್ರ ಯುವಕ ಸಂಘ ತೊಂಬತ್ತು ಮನೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ತೊಂಬತ್ತು ಮನೆಯ ಶಾಲಾ ಆವರಣ ಹಾಗೂ ಸಾರ್ವಜನಿಕ ಸ್ಮಶಾನದಲ್ಲಿ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ತ್ರಿನೇತ್ರ ಯುವಕ ಸಂಘದ ಪದಾಧಿಕಾರಿಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0