ಹೆಬ್ಬಾಲೆ : ಎಆರ್ ಪಬ್ಲಿಕ್ ಶಾಲೆಯಲ್ಲಿ ಪರಿಸರ ದಿನಾಚರಣೆ
ಕುಶಾಲನಗರ : ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಹೆಚ್.ಹೆಚ್.ಸುಂದರ್ ಹೇಳಿದರು.
ಸಮೀಪದ ಹೆಬ್ಬಾಲೆ ಎಆರ್ ಪಬ್ಲಿಕ್ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಮವಾರಪೇಟೆ ತಾಲ್ಲೂಕು , ಚಿಕ್ಕ ಅಳುವಾರದಮ್ಮ ನವ ಜೀವನ ಸಮಿತಿ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಕೂಡಿಗೆ ವಲಯ ಇವರ ಸಂಯುಕ್ತಾಶಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ನೀರು ಹಾಕುವ ಮೂಲಕ ಉದ್ಘಾಟಿಸಿದರು.
ಪರಿಸರದ ಮಹತ್ವ, ಮಾನವನ ಜೀವನದಲ್ಲಿ ಪರಿಸರಕ್ಕೆ ನೀಡಬಹುದಾದ ಕೊಡುಗೆಗಳು, ಪರಿಸರದಲ್ಲಿ ಸಿಗುವಂತಹ ಔಷಧೀಯ ಸಸ್ಯಗಳು ಮತ್ತು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಉತ್ತಮ ಗುಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಎಆರ್ ಪಬ್ಲಿಕ್ ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್, ರಘು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಬನಶಂಕರಿ ಸಮುದಾಯ ಭವನದ ಅಧ್ಯಕ್ಷ ಜಿ.ಎಲ್.ರಾಮಪ್ಪ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ್,ಮಾಜಿ ಅಧ್ಯಕ್ಷೆ ಅರುಣಾಕುಮಾರಿ,ಎಆರ್ ಪಬ್ಲಿಕ್ ಶಾಲೆ ಮುಖ್ಯ ಶಿಕ್ಷಕಿ ಹೆಚ್.ಆರ್.ಶಿಲ್ಪ, ದೈಹಿಕ ಶಿಕ್ಷಕ ಎಚ್.ಪಿ. ಕರುಂಬಯ್ಯ,ವಲಯ ಮೇಲ್ವಿಚಾರಕರಾದ ಯತೀಶ್,ಕಲ್ಪನಾ,ಹೆಬ್ಬಾಲೆ ಒಕ್ಕೂಟ ಅಧ್ಯಕ್ಷರು ಹಾಗೂ ಹಳೆಕೋಟೆ ಒಕ್ಕೂಟ ಅಧ್ಯಕ್ಷರು ಹಾಗೂ ನಮ್ಮ ಜೀವನ ಸಮಿತಿಯ ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳು ಹಾಗೂ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.
ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕುಶಾಲನಗರ ಸಮೀಪದ ಹೆಬ್ಬಾಲೆ ಎಆರ್ ಪಬ್ಲಿಕ್ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
