ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಆಂದೋಲನಕ್ಕೆ ಚಾಲನೆ

ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಆಂದೋಲನಕ್ಕೆ ಚಾಲನೆ

*ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಆಂದೋಲನಕ್ಕೆ ಚಾಲನೆ*: *ಅರಣ್ಯ, ಪರಿಸರ ಸಂರಕ್ಷಿಸಲು* *ಪ್ರತಿಯೊಬ್ಬರೂ ಪಣತೊಡಲು ಮನವಿ*: ಕುಶಾಲನಗರ,( ಕೊಡಗು ಜಿಲ್ಲೆ): ಜೂ. 4 : ನೆಲ- ಜಲ, ಅರಣ್ಯ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ನಾವು ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರೂ ಆದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಪರಿಸರ ಸಂಘಟಕ ಟಿ.ಜಿ.ಪ್ರೇಮಕುಮಾರ್ ಮನವಿ ಗುರುವಾರ ಮಾಡಿದರು.

ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ *"ನಮ್ಮ ನಡೆ ಹಸಿರೆಡೆಗೆ"* *ಅಭಿಯಾನ( *ಗೋ ಗ್ರೀನ್"*:: (Go Green Campaign) ದಡಿ ಗುರುವಾರ( ಜೂ.4 ರಂದು)ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’; ಎಂಬ ಘೋಷವಾಕ್ಯದೊಂದಿಗೆ *ವಿಶ್ವ ಪರಿಸರ ದಿನಾಚರಣೆ: 2026 ಕಾರ್ಯಕ್ರಮ* ದ ಅಂಗವಾಗಿ ಕೊಡಗು ಅರಣ್ಯ ವೃತ್ತದ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯ ಕಛೇರಿ ಹಾಗೂ ಶಾಲೆಯ ಇಕೋ ಕ್ಲಬ್ ಮತ್ತು ಎನ್ನೆಸ್ಸೆಸ್, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆ ಹಾಗೂ ಎಸ್.ಡಿ.ಎಂ.ಸಿ.ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಂಘಟನಾ ಸಮಿತಿಯ ಸಹಯೋಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದಲ್ಲಿ ಶಾಲಾವರಣದಲ್ಲಿ ಅರಣ್ಯ ಸಸಿ ನೆಟ್ಟು ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು.

ಮುಂದಿನ ಉತ್ತಮ ಭವಿಷ್ಯಕ್ಕಾಗಿ ನಮ್ಮ ಪರಿಸರವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ಉದ್ದೇಶದಿಂದ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜೂನ್ 5 ರಂದು ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ‘ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಅರಣ್ಯ ಸಸಿಗಳನ್ನು ನೆಟ್ಟು ಬೆಳೆಸಿ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕಟಿಬದ್ಧರಾಗಬೇಕು’.

ಪರಿಸರದ ಸಮತೋಲನ ಸುಸ್ಥಿತಿಗಾಗಿ, ಜೀವ ವೈವಿಧ್ಯತೆಯ ರಕ್ಷಣೆಗಾಗಿ, ಸಂಪನ್ಮೂಲಗಳ ಸುಸ್ಥಿರ ಬಳಕೆಗಾಗಿ ಹಾಗೂ ಜೀವ ಸಂಕುಲದ ಉಳಿವಿಗಾಗಿ ಅರಣ್ಯ ಹಾಗೂ ವನ್ಯಜೀವಿಗಳು ಮತ್ತು ಜೀವಿ- ವೈವಿಧ್ಯವನ್ನು ಸಂರಕ್ಷಿಸುವುದು ಇಂದಿನ ಅಗತ್ಯವಾಗಿದೆ ಎಂದರು. ಪರಿಸರದ ಸಮತೋಲನ ಸುಸ್ಥಿತಿಗಾಗಿ, ಜೀವ ವೈವಿಧ್ಯತೆಯ ರಕ್ಷಣೆಗಾಗಿ, ಸಂಪನ್ಮೂಲಗಳ ಸುಸ್ಥಿರ ಬಳಕೆಗಾಗಿ ಹಾಗೂ ಜೀವ ಸಂಕುಲದ ಉಳಿವಿಗಾಗಿ ಅರಣ್ಯ ಹಾಗೂ ವನ್ಯಜೀವಿಗಳು ಮತ್ತು ಜೀವಿ- ವೈವಿಧ್ಯವನ್ನು ಸಂರಕ್ಷಿಸುವುದು ಇಂದಿನ ಅಗತ್ಯವಾಗಿದೆ ಎಂದು ಪ್ರೇಮಕುಮಾರ್ ಹೇಳಿದರು.

ನಾವು ನೈಸರ್ಗಿಕ ಪರಿಸರಕ್ಕೆ ಯಾವುದೇ ಧಕ್ಕೆಯನ್ನುಂಟು ಮಾಡದಿದ್ದರೆ ನಾವು ಸುರಕ್ಷಿತ ಬದುಕು ಕಂಡುಕೊಳ್ಳಬಹುದು. ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ತೊಡಗಿದಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಸಾಧ್ಯವಾಗುತ್ತದೆ ಎಂದರು.

ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಪ್ರಮೋದ್ ಮಾತನಾಡಿ, ಅರಣ್ಯ ಸಸಿ ನೆಟ್ಟು ಬೆಳೆಸುವಲ್ಲಿ ನಾಗರಿಕರ ಸಹಭಾಗಿತ್ವ ಅಗತ್ಯ. ಕೊಡಗು ಅರಣ್ಯ ವೃತ್ತದಲ್ಲಿ ಪ್ರಸಕ್ತ ಸಾಲಿನಲ್ಲಿ 1.26 ಲಕ್ಷ ಗಿಡ ನೆಟ್ಟು ಬೆಳೆಸುವ ಉದ್ದೇಶ ಹೊಂದಲಾಗಿದ್ದು, ಈ ಕಾರ್ಯಕ್ಕೆ ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ನಾಗರಿಕರು ಹಾಗೂ ಶಾಲಾ – ಕಾಲೇಜು ವಿದ್ಯಾರ್ಥಿಗಳಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಪರಿಸರ ಕಾರ್ಯಕ್ರಮಗಳಿಗೆ ಸಹಕರಿಸಬೇಕು ಎಂದರು.

ಇಂದು ಪರಿಸರ ಸಂರಕ್ಷಣೆ ಎಂಬುದು ನಮ್ಮೆಲ್ಲರ ಆದ್ಯ ಕರ್ತವ್ಯ, ಜವಾಬ್ದಾರಿ ಮತ್ತು ಹೊಣೆಗಾರಿಕೆಯಾಗಿದೆ. ಈ ದಿಸೆಯಲ್ಲಿ ಭವಿಷ್ಯತ್ತಿನ ದೃಷ್ಠಿಯಲ್ಲಿ ನಾವು ಅರಣ್ಯ ಮತ್ತು ಪರಿಸರ ಸಂರಕ್ಷಣೆಯತ್ತ ಮೊತ್ತಮೊದಲ ಹೆಜ್ಜೆಹಾಕಿ ಮುನ್ನುಗ್ಗಬೇಕಿದೆ. ಆದ್ದರಿಂದ ನಾವು ಈ ಪ್ರಕೃತಿಯನ್ನು ಸಂರಕ್ಷಿಸಿ ಈ ಜಗತ್ತನ್ನು ಮಾಲಿನ್ಯರಹಿತ ಪರಿಸರದಿಂದ ಕೂಡಿದ ಸುಂದರ ತಾಣವನ್ನಾಗಿ ಮಾಡಲು ಕಂಕಣ ಬದ್ಧರಾಗಬೇಕಾಗಿದೆ ಎಂದು ಆರ್ ಎಫ್ ಓ ಪ್ರಮೋದ್ ಮನವಿ ಮಾಡಿದರು.

*ಪರಿಸರ ಸಂರಕ್ಷಣೆ* ಕುರಿತು ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಅರಣ್ಯ ಇಲಾಖೆಯ ಡಿಆರ್‌ಎಫ್‌ಓಗಳಾದ ಎಂ.ಗಣೇಶ್, ಎನ್.ಬಿ. ಹರೀಶ್ ಕುಮಾರ್, ಶಾಲಾ ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಬಿ.ಡಿ. ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ,ಗ್ರಾಮಸ್ಥರು ಇದ್ದರು.

ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು. ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಅರಣ್ಯ ಸಿಬ್ಬಂದಿ ಪರಿಸರಕ್ಕೆ ಸಂಬಂಧಿಸಿದ ಪ್ರಚಾರ ಫಲಕಗಳನ್ನು ಹಿಡಿದು ಕೂಡ್ಲೂರು‌ ಗ್ರಾಮದಲ್ಲಿ ಪರಿಸರ ಜಾಗೃತಿ ಮೂಡಿಸಿದರು. *ಕೂಡ್ಲೂರು ಗ್ರಾಮದಲ್ಲಿ ಪರಿಸರ ಜಾಗೃತಿ ಜಾಥಾ*,: ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅರಣ್ಯ ಸಿಬ್ಬಂದಿ ಜತೆಗೂಡಿ ಕೂಡ್ಲೂರು ಗ್ರಾಮದಲ್ಲಿ ಪರಿಸರ ಜಾಗೃತಿ ಜಾಥಾ*,: ನಡೆಸಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಹಸಿರೇ ಉಸಿರು- ಜಲವೇ ಜೀವಜಾಲ, ಪಶ್ಚಿಮಘಟ್ಟಗಳ ಸಂರಕ್ಷಣೆ ವನ್ಯಜೀವಿಗಳ ಸಂರಕ್ಷಣೆ - ನಮ್ಮೆಲ್ಲರ ಹೊಣೆ ಜೀವ ಸಂಕುಲದ ರಕ್ಷಣೆ - ನಮ್ಮೆಲ್ಲರ ಹೊಣೆ ವನ್ಯಜೀವಿಗಳ ಸುಸ್ಥಿತಿ, ದೇಶಕ್ಕೆ ಪ್ರಗತಿ ವನ್ಯಜೀವಿಗಳ ಉಳಿವು, ನಿಸರ್ಗ ಸೊಬಗಿನ ಚೆಲುವು ವನ್ಯಮೃಗಗಳ ರಕ್ಷಿಸಿ, ಅವುಗಳ ಬೇಟೆ-ಭಕ್ಷಣೆ ನಿಲ್ಲಿಸಿ ವನಸಿರಿ ಪ್ರಕೃತಿಯ ವರದಾನ, ಜೀವ ಸಂಪತ್ತಿನ ಉದ್ಯಾನ ನೆಲರಕ್ಷಣೆಗೆ ಸೈನಿಕರು, ಜಲ ರಕ್ಷಣೆಗೆ ಮರಗಳು ಬೇಡ ವನ್ಯಜೀವಿಗಳ ನಾಶ, ಸಂಪದ್ಭರಿತವಾಗಲಿ ದೇಶ ನಗುವಿರಲಿ ಬಾಳಿಗೆ, ವನವಿರಲಿ ನಾಳೆಗೆ ವನ್ಯಜೀವಿಗಳ ಸುಸ್ಥಿತಿ, ದೇಶಕ್ಕೆ ಪ್ರಗತಿ ಎಂಬಿತ್ಯಾದಿ ಪರಿಸರ ಘೋಷಣೆಗಳ ಫಲಕಗಳನ್ನು ಹಿಡಿದು ಗ್ರಾಮದಲ್ಲಿ ಪರಿಸರ ಜಾಗೃತಿ ಜಾಥಾ ನಡೆಸಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.