ಏ.15 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಮೌಲ್ಯಮಾಪನ

Apr 8, 2026 - 23:37
 0  134
ಏ.15 ರ ವರೆಗೆ ಎಸ್ಸೆಸ್ಸೆಲ್ಸಿ  ಪರೀಕ್ಷೆ-1ರ ಮೌಲ್ಯಮಾಪನ

ಮಡಿಕೇರಿ ಏ.08:-ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಏಪ್ರಿಲ್, 08 ರಿಂದ 15 ರವರೆಗೆ 2026 ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1 ರ ಮೌಲ್ಯಮಾಪನ ನಡೆಯಲಿದ್ದು, ಮೌಲ್ಯಮಾಪನ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ಹೊರತುಪಡಿಸಿ ಈ ಮೌಲ್ಯಮಾಪನ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಮೌಲ್ಯಮಾಪನ ಕಾರ್ಯ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮೌಲ್ಯಮಾಪನ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

 ಈ ಆದೇಶವು ಮೌಲ್ಯಮಾಪನ ನಡೆಸುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 1
Sad Sad 0
Wow Wow 0