ಬಾಬು ಜಗಜೀವನ್ ರಾಂ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ:ಜಿಲ್ಲಾಧಿಕಾರಿ ವೆಂಕಟ್ ರಾಜಾ

ಮಡಿಕೇರಿ: ಬಾಬು ಜಗಜೀವನ್ ರಾಂ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು. ನಗರದ ನೂತನ ತಾ.ಪಂ.ಸಭಾಂಗಣದಲ್ಲಿ ಭಾನುವಾರ ನಡೆದ ಬಾಬು ಜಗಜೀವನ್ ರಾಂ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಇವರ ಪಾತ್ರ ಮಹತ್ವದ್ದಾಗಿದೆ. ಸ್ವಾತಂತ್ರ್ಯಾ ನಂತರದಲ್ಲಿ ಭಾರತ ಸರ್ಕಾರದ ವಿವಿಧ ಸಚಿವ ಹುದ್ದೆಗಳಲ್ಲಿ ಜನಸೇವೆಗಾಗಿ ತಮ್ಮ ಜೀವನವನ್ನು ಮೀಸಲಿಟ್ಟರು ಎಂದರು.
ಕೇಂದ್ರ ರೈಲ್ವೆ, ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದರು. ಕೃಷಿ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾದ್ದದು, ಈ ಹಿನ್ನೆಲೆಯಲ್ಲಿ ಅವರನ್ನು ಹಸಿರು ಕ್ರಾಂತಿಯ ಹರಿಕಾರ ಎಂದು ಕರೆಯಲಾಗುತ್ತದೆ. ಇವರ ಜೀವನ ಆದರ್ಶವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನ ಅವರು ಮಾತನಾಡಿ ಬಾಬು ಜಗಜೀವನ್ ರಾಂ ಅವರು ಸಮಾನತೆಯ ಹರಿಕಾರರೂ ಆಗಿದ್ದರು. ವಿವಿಧ ಇಲಾಖೆಯ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಅಮೂಲ್ಯವಾದದ್ದು ಎಂದು ಅವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ವ್ಯವಸ್ಥಾಪಕಾರದ ಜೆ.ಬಿ.ಆಶಾ, ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷರಾದ ಆರ್.ರಂಗಸ್ವಾಮಿ ಇತರರು ಇದ್ದರು.
What's Your Reaction?






