ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ವಾದ ಮಂಡನೆ ಪೂರ್ಣ: ಯಾವಾಗ ತೀರ್ಪು ಪ್ರಕಟಗೊಳ್ಳಲಿದೆ ಗೊತ್ತೇ?

ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಪ್ರಕರಣದ ವಾದ ಮಂಡನೆ ಪೂರ್ಣ:  ಯಾವಾಗ ತೀರ್ಪು ಪ್ರಕಟಗೊಳ್ಳಲಿದೆ ಗೊತ್ತೇ?
ಮಾಜಿ ಸಂಸದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಮೊಮ್ಮಗ, ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೈಸೂರಿನ ಕೆ.ಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದ ವಾದ ಮಂಡನೆ ಪೂರ್ಣವಾಗಿದ್ದು, ವಿಶೇಷ ನ್ಯಾಯಾಲಯ ತೀರ್ಪು ತೀರ್ಪು ಕಾಯ್ದಿರಿಸಿದೆ. ಪ್ರಾಸಿಕ್ಯೂಷನ್ ಪರ ಎಸ್‌ಪಿಪಿ ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲರಾದ ನಳಿನಾ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಆದೇಶವನ್ನು ಕಾಯ್ದಿರಿಸಿದ್ದಾರೆ. ಜುಲೈ 30ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದ ತೀರ್ಪು ಪ್ರಕಟಿಸಲಿದೆ.