ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ

ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ
ಆದೇಶ ಪ್ರತಿ.

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

 ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ:

ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 24-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ಕೈಗೊಂಡು ದಿನಾಂಕ: 24-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.

ರಾಜ್ಯದ ಇತರೆ ಭಾಗಗಳಲ್ಲಿ (ಗ್ರೇಟರ್ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ಉಳಿದ ಭಾಗಗಳು):

ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 12-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ದಿನಾಂಕ: 12-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು. ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು. ವಿಶೇಷ ಸೂಚನೆ:- ಕಾಲಕಾಲಕ್ಕೆ ಸರ್ಕಾರದಿಂದ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.