ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ನೇಮಕ
admincoorgdaily

ಮಡಿಕೇರಿ: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಜಿಲ್ಲಾ ಸಮಿತಿಯ ನಾಯಕರು ಹಾಗೂ ಬ್ಲಾಕ್ ಅಧ್ಯಕ್ಷರೊಂದಿಗೆ ಚರ್ಚಿಸಿ ಫ್ಯಾನ್ಸಿ ಪಾರ್ವತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಿ.ಆರ್.ಪುಷ್ಪಲತಾ ಅವರು ತಿಳಿಸಿದ್ದಾರೆ.
ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷೆ ಜಿ.ಆರ್.ಪುಷ್ಪಲತಾ, ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ನಾಪೋಕ್ಲು ಬ್ಲಾಕ್ ಕಾರ್ಯಾಧ್ಯಕ್ಷ ಶೌಕತ್ ಆಲಿ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಮತ್ತಿತರ ಪ್ರಮುಖರು ಫ್ಯಾನ್ಸಿ ಪಾರ್ವತಿ ಅವರಿಗೆ ಆದೇಶ ಪತ್ರ ನೀಡಿದರು.