ಬೀಳ್ಕೊಡುಗೆ ಸಮಾರಂಭ, ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ
admincoorgdaily

ಮಡಿಕೇರಿ ಜೂ.20:-ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಗವತಿ ನಗರ, ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ತಾವೂರು ಗ್ರಾಮದಲ್ಲಿ ಅರಿವು ಕಾರ್ಯಕ್ರಮ ನಡೆಯಿತು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತಿವಾರು ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ, ಇಲಾಖೆಯ ಯೋಜನೆಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಲು ಕರೆ ನೀಡಿದರು.
ಹಾಗೆಯೇ ಇಲಾಖೆ ಯೋಜನೆಗಳಾದ ಭೇಟಿ ಬಚಾವ್ ಬೇಟಿ ಪಡಾವೊ, ಅಕ್ಕಪಡೆ, ಭಾಗ್ಯಲಕ್ಷ್ಮಿ, ಮಾತೃ ವಂದನ, ಗೃಹಲಕ್ಷ್ಮಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ನಂತರ 36 ವರ್ಷ 7 ತಿಂಗಳ ಸೇವೆ ಸಲ್ಲಿಸಿ ನಿವೃತ್ತ ಗೊಂಡಿರುವ ತಾವೂರು ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಎಚ್.ಆರ್, 22 ವರ್ಷ ಸೇವೆ ಸಲ್ಲಿಸಿ ನಿವೃತ್ತ ಗೊಂಡಿರುವ ತಣ್ಣಮಾನಿ ಸಹಾಯಕಿ ಮೋಹಿನಿ ಎಂ.ಸಿ, 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತ ಗೊಂಡಿರುವ ಮಡೆಕಾನ (ಕರಿಕೆ)ಸಹಾಯಕಿ ದಮಯಂತಿ ಕೆ ಆರ್ ರವರಿಗೆ ಗೌರವ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು.
ನಂತರ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಸಂಯೋಜಕರಾದ ಮಮತಾ ಮಾತನಾಡಿ ಸಖಿ ಒನ್ ಸ್ಟಾಪ್ ಸೆಂಟರ್ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿವಿಧ ಇಲಾಖೆಗಳಲ್ಲಿ ಮಹಿಳೆಯರಿಗಾಗಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಅರಿಯಲು ಎಲ್ಲಾ ಮಹಿಳೆಯರು ಇಲಾಖೆಯ 08272-228010 ದೂರವಾಣಿ ಸಂಖ್ಯೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ, ಮಡಿಕೇರಿ ಇಲ್ಲಿ ಸಂಪರ್ಕಿಸಲು ತಿಳಿಸಿದರು.
ಕಾರ್ಯಕ್ರಮದ ಸ್ವಾಗತವನ್ನು ಅಂಗನವಾಡಿ ಕಾರ್ಯಕರ್ತೆ ಸುಶಿ, ನಿರೂಪಣೆಯನ್ನು ಕೋಡಿಮೊಟ್ಟೆ ಅಂಗನವಾಡಿ ಕಾರ್ಯಕರ್ತೆ ಮಾಲತಿ, ವಂದನಾರ್ಪಣೆ ತಾವೂರು ಅಂಗನವಾಡಿ ಕಾರ್ಯಕರ್ತೆ ಗೀತಾ ಅವರು ನಡೆಸಿದರು.