Kodagu

ಶಿಕ್ಷಕಿ ಬಿ.ಡಿ.ವನಜಾಕ್ಷಿಗೆ ಬೀಳ್ಕೊಡುಗೆ

admincoorgdaily

ಶಿಕ್ಷಕಿ ಬಿ.ಡಿ.ವನಜಾಕ್ಷಿಗೆ ಬೀಳ್ಕೊಡುಗೆ

ಮಡಿಕೇರಿ ಆ.4 : ಸೋಮವಾರಪೇಟೆ ತಾಲ್ಲೂಕಿನ ಹೊಸಗುತ್ತಿ ಸರಕಾರಿ ಶಾಲೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಡಿ.ವನಜಾಕ್ಷಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಬಿ.ಡಿ.ವನಜಾಕ್ಷಿ ಅವರು ಸಕಲೇಶಪುರ ತಾಲ್ಲೂಕಿನಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ, ಶನಿವಾರಸಂತೆಯಲ್ಲಿ ಸೇವೆ ಸಲ್ಲಿಸಿದರು. ಪ್ರಸ್ತುತ ಹೊಸಗುತ್ತಿ ಸರಕಾರಿ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿ ತಮ್ಮ 30 ವರ್ಷಗಳ ಸುದೀರ್ಘ ಸೇವೆಯನ್ನು ಸಾರ್ಥಕಗೊಳಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ಪ್ರಮುಖರು, ಶಿಕ್ಷಕರು ಹಾಗೂ ಗ್ರಾಮಸ್ಥರು ಬಿ.ಡಿ.ವನಜಾಕ್ಷಿ ಅವರ ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿ ಸನ್ಮಾನಿಸಿ ಗೌರವಿಸಿದರು.