ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತರ ಬಂಧನ ಖಂಡಿಸಿ ಮಡಿಕೇರಿಯಲ್ಲಿ ರೈತ ಸಂಘ ಪ್ರತಿಭಟನೆ
ಮಡಿಕೇರಿ: ಬಿಡದಿ ರೈತಪರ ಹೋರಾಟಕ್ಕೆ ತೆರಳುತ್ತಿದ್ದ ರೈತರನ್ನು ಬಂಧಿಸಿರುವ ಕ್ರಮ ಖಂಡಿಸಿ ಕೊಡಗು ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಜುಲೈ ೨೪ರಂದು ನಡೆಯಬೇಕಿದ್ದ ಬಿಡದಿ ಹೋರಾಟಕ್ಕೆ ಹೋಗುವಾಗ ಕೊಡ್ಲಿಪೇಟೆ ಮತ್ತು ತಿತಿಮತಿ ಬಳಿ ಕೊಡಗಿನಿಂದ ಬಂದಿದ್ದ ರೈತರನ್ನು ಮಾತ್ರ ಪೊಲೀಸರು ತಡೆದು ನಿಲ್ಲಿಸಿದ್ದರು. ಹೋರಾಟದಿಂದ ರೈತರನ್ನು ವಶಕ್ಕೆ ಪಡೆದು, ಸುತ್ತಾಡಿಸಿ, ಬಂಧನದಲ್ಲಿಟ್ಟಿರುವುದು ಪೊಲೀಸ್ ಇಲಾಖೆ ನಡೆ ಸರಿಯಾಗಿಲ್ಲ. ಮಹಿಳೆಯರು ಸೇರಿದಂತೆ ರೈತರು ಕೂಡ ಇದರಿಂದ ತೊಂದರೆ ಅನುಭವಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಆಗಮಿಸುವಂತೆ ಪ್ರತಿಭಟನಾ ನಿರತರು ಪಟ್ಟು ಹಿಡಿದರು. ಪ್ರತಿಭಟನಾ ನಿರತರ ಮನವಿ ಸ್ಥಳಕ್ಕೆ ಆಗಮಿಸಿದ ಸಂದರ್ಭ ಪ್ರತಿಭಟನಾ ನಿರತರು ಪ್ರತಿಭಟನೆಗೆ ತೆರಳುತ್ತಿದ್ದ ನಮ್ಮನ್ನು ಬಂಧಿಸಲು ಕಾರಣವೇನು ಎಂದು ಪ್ರಶ್ನಿಸಿದರು. ಪ್ರತಿಭಟನೆಯಲ್ಲಿ ಕೊಡಗು ಜಿಲ್ಲಾ ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸುರೇಶ್ ಚಕ್ರವರ್ತಿ, ಪ್ರಮುಖರಾ ದಿನೇಶ್, ಶಿವಣ್ಣ, ಸರಗೂರು ನಟರಾಜ್, ಹೂವಯ್ಯ, ಮಹಾದೇವ ಇತರರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
