ದೇವರಪುರದಲ್ಲಿ ಭೀಕರ ಅಪಘಾತ: ಇಬ್ಬರು ಯುವಕರ ದುರ್ಮರಣ
ದೇವರಪುರ:ದೇವರಪುರ ಶ್ರೀ ರಾಜ ರಾಜೇಶ್ವರಿ ಆಶ್ರಮದ ಕಮಾನು ಮುಂಭಾಗದ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.
ಬೆಳಿಗ್ಗೆ ಸುಮಾರು 6.30ರ ಸಮಯದಲ್ಲಿ ಪೆಟ್ರೋಲ್ ಟ್ಯಾಂಕರ್ ಹಾಗೂ KA-19 ನೋಂದಾವಣೆಯ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಈ ವೇಳೆ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಸುಮಾರು 24 ವರ್ಷ ವಯೋಮಿತಿಯ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರ ತೆಗೆದರು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಟ್ಯಾಂಕರ್ ಚಾಲಕನಿಂದ ವಿಚಾರಣೆ ನಡೆಸುತ್ತಿದ್ದಾರೆ. ಅತೀವೇಗ ಹಾಗೂ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣವಿರಬಹುದೆಂದು ಶಂಕಿಸಲಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
2
Wow
0
