ತಲಕಾವೇರಿ ಜಾತ್ರೆ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ: ಸೆ.18 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ:-66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಸೆಪ್ಟೆಂಬರ್, 18 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತಲಕಾವೇರಿ ಜಾತ್ರೆ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಲಿದೆ. ಆದ್ದರಿಂದ ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.