ಜ.28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ
admincoorgdaily

ಮಡಿಕೇರಿ:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಪ್ರಯುಕ್ತ ಜನವರಿ, 28 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರತಿಮೆ ಬಳಿ ಗೌರವ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಜನವರಿ 28 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಿಂದ ಶಾಲಾ-ಕಾಲೇಜು, ಸೈನಿಕ ಶಾಲೆ, ಎನ್‍ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಮಾರ್ಚ್ ಪಾಸ್ಟ್ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.