ಕಾಟಕೇರಿಯ ಹರ್ ಮಂದಿರ ವಸತಿ ಶಾಲೆಯಲ್ಲಿ ಬೆಂಕಿ ಅವಘಡ:ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಎಎಸ್ ಪೊನ್ನಣ್ಣ
ಮಡಿಕೇರಿ: ತಾಲೂಕಿನ ಕಾಟಕೇರಿಯ ಹರ್ ಮಂದಿರ್ ಎಂಬ ಸರಕಾರೇತರ ಸೇವಾ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ಇ ಬೆಂಕಿ ಅವಘಡದಲ್ಲಿ ಮೃತ ಪಟ್ಟಿದ್ದು ಹಾಗೂ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಹಿತಿ ತಿಳಿದೊಡನೆ, ಬೆಂಗಳೂರಿನಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ತಮ್ಮ ಸಭೆಯನ್ನು ಮುಟುಕುಗೊಳಿಸಿ ನೇರವಾಗಿ ಮಡಿಕೇರಿಯತ್ತ ಧಾವಿಸಿದರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳ ಆರೋಗ್ಯ ವಿಚಾರಿಸಿ, ಮಕ್ಕಳಿಗೆ ಹಾಗೂ ಅವರ ಪೋಷಕರಿಗೆ ಧೈರ್ಯ ತುಂಬಿದರು. ಬಳಿಕ ಅಲ್ಲಿ ಇದ್ದ ಇತರ ರೋಗಿಗಳಿಗೆ ಆರೋಗ್ಯ ವಿಚಾರಿಸಿದರು.
ನಂತರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕರು ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಇಲಾಖೆ ತನಿಖೆಯ ವರದಿ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಮೃತ ಬಾಲಕನ ಕುಟುಂಬಕ್ಕೆ ಕೂಡಲೇ ₹ 5 ಲಕ್ಷ ಪರಿಹಾರ ಘೋಷಿಸಿದ ಮಾನ್ಯ ಶಾಸಕರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಇನ್ನೂ ಹೆಚ್ಚಿನ ಪರಿಹಾರ ಕೊಡಿಸಲು ಪ್ರಯತ್ನಿಸುವುದಾಗಿ ಹೇಳಿದರು. ಬಳಿಕ ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಅಲ್ಲಿಂದ ನೇರವಾಗಿ ಚೆಟ್ಟಿಮಾನಿಕೇಕಡ ಮನೆಗೆ ಭೇಟಿ ನೀಡಿ, ಮೃತ ವಿದ್ಯಾರ್ಥಿಯ ಮನೆಯವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷರು ಹಂಸ ಕೊಟ್ಟಮುಡಿ, ನಗರ ಕಾಂಗ್ರೆಸ್ ಅಧ್ಯಕ್ಷರು ಪ್ರಕಾಶ್ ಆಚಾರ್ಯ, ಸೂರಜ್ ಹೊಸೂರು, ಮುನೀರ್, ರಾಜೇಶ್ ಯಲ್ಲಪ್ಪ, ಚೆಟ್ಟಿಮಾನಿ ವಲಯ ಅಧ್ಯಕ್ಷರು ಕೀರ್ತಿ, ಹ್ಯಾರೀಶ್, ರಮೇಶ್, ಕೀರ್ತಿ ಕುಮಾರ್, ಅಧಿಕಾರಿ ವರ್ಗದವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.