ಮೇ.5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ

Apr 30, 2026 - 20:32
 0  111
ಮೇ.5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘ ಕಾಲೇಜು ಮೈದಾನದ ಬಳಿ ನಿರ್ಮಿಸಿರುವ ಫೈರಿಂಗ್ ರೇಂಜ್ ಮೇ ೫ ರಂದು ಉದ್ಘಾಟನೆಗೊಳ್ಳಲಿದೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.

 ಕೊಡಗು ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್ ಹಾಗೂ ಎನ್‌ಸಿಸಿಯ ಕಮಾಂಡಿಂಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಅವರು ಫೈರಿಂಗ್ ರೇಂಜ್ ನ್ನು ಉದ್ಘಾಟಿಸಲಿದ್ದಾರೆ. ಫೀ.ಮಾ.ಕಾರ್ಯಪ್ಪ ಕಾಲೇಜ್ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎನ್‌ಸಿಸಿಯ ಆಡಳಿತಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಶ್ರೀನಿವಾಸ್ ಎಸ್., ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಮುಕ್ಕಾಟಿರ ಎ.ಅಪ್ಪಯ್ಯ, ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಾಗೂ ವಕೀಲ ಮಂಡುವಂಡ ಸುದಯ್ ನಾಣಯ್ಯ ಹಾಗೂ ಉದ್ಯಮಿ ಪುರುಷೋತ್ತಮ್ ಪಿ. ಬೆಂಗಳೂರು ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ರೂ.೪.೯೫ ಲಕ್ಷ ವೆಚ್ಚದ ಯೋಜನೆ: ಮಡಿಕೇರಿ ನಗರದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಎನ್‌ಸಿಸಿ ಶಿಬಿರಾರ್ಥಿಗಳಿಗೆ ಸಹಕಾರಿಯಾಗಬೇಕು ಎನ್ನುವ ಉದ್ದೇಶದಿಂದ ಫೈರಿಂಗ್ ರೇಂಜ್ ನ್ನು ನಿರ್ಮಿಸಲಾಗಿದೆ. ಹಳೇ ವಿದ್ಯಾರ್ಥಿಗಳು ಹಾಗೂ ದಾನಿಗಳ ಸಹಕಾರದಿಂದ ಸುಮಾರು ೪.೯೫ ಲಕ್ಷ ರೂ. ವೆಚ್ಚದ ಯೋಜನೆ ಸಾಕಾರಗೊಂಡಿದೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

 ತಾವು ಸಂಘದ ಅಧ್ಯಕ್ಷನಾದ ನಂತರ ಪ್ರಾಂಶುಪಾಲರಾದ ಮೇಜರ್ ಪ್ರೊ.ರಾಘವ ಬಿ. ಅವರ ಸಂಪೂರ್ಣ ಸಹಕಾರದೊಂದಿಗೆ ಸದಸ್ಯತ್ವ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ. ಕಳೆದ ಎರಡೂವರೆ ತಿಂಗಳಿನಲ್ಲಿ ದಾಖಲೆಯ ಸಂಖ್ಯೆಯ ಹಳೇ ವಿದ್ಯಾರ್ಥಿಗಳು ಸದಸ್ಯತ್ವ ಪಡೆದುಕೊಂಡಿದ್ದು, ಸಂಘದ ಬಲ ಹೆಚ್ಚಾಗಿದೆ.

 ಸದಸ್ಯತ್ವವನ್ನು ಹೆಚ್ಚಿಸಲು ಪ್ರಾಂಶುಪಾಲರು ನಿರಂತರ ಶ್ರಮಿಸುತ್ತಿದ್ದಾರೆ. ಕಾಲೇಜ್ ನ ಅಭಿವೃದ್ಧಿ, ಶೈಕ್ಷಣಿಕ ಪ್ರಗತಿ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವುದಲ್ಲದೆ, ಸಮಾಜಿಕ ಕಳಕಳಿಯನ್ನು ಕೂಡ ತೋರುತ್ತಿರುವ ಹಳೇ ವಿದ್ಯಾರ್ಥಿ ಸಂಘಕ್ಕೆ ಇತ್ತೀಚಿನ ದಿನಗಳಲ್ಲಿ ದಾನಿಗಳ ಸಹಕಾರವೂ ಹೆಚ್ಚಾಗುತ್ತಿದೆ ಎಂದು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0