ಕೊಡಗು‌ ಜಿಲ್ಲೆಯಲ್ಲಿ ಮೀನುಗಾರಿಕೆ ನಿಷೇಧ

Jun 5, 2026 - 13:43
 0  1.1k
ಕೊಡಗು‌ ಜಿಲ್ಲೆಯಲ್ಲಿ ಮೀನುಗಾರಿಕೆ ನಿಷೇಧ

ಮಡಿಕೇರಿ,ಜೂ.03:-ಮುಂಗಾರು ಆರಂಭದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.

 ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿ ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಮೀನುಗಾರಿಕೆ ಉಪ ನಿರ್ದೇಶಕರಾದ ಸಿ.ಎಸ್.ಸಚಿನ್ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 1
Sad Sad 1
Wow Wow 0