ಕೆದಮುಳ್ಳೂರು ವಲಯ ಕಾಂಗ್ರೆಸ್ ವತಿಯಿಂದ ಆಹಾರ ಕಿಟ್ ವಿತರಣೆ

ಕೆದಮುಳ್ಳೂರು ವಲಯ ಕಾಂಗ್ರೆಸ್ ವತಿಯಿಂದ ಆಹಾರ ಕಿಟ್ ವಿತರಣೆ

ವಿರಾಜಪೇಟೆ:ವಿಧಾನಸಭಾ ಕ್ಷೇತ್ರದ, ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ವಲಯ ಕಾಂಗ್ರೆಸ್ ವತಿಯಿಂದ ಶಾಸಕರ 51ನೇ ಜನ್ಮದಿನದ ಪ್ರಯುಕ್ತ, ಆಯ್ದ ಫಲಾನುಭವಿಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ಕೆದಮಳ್ಳೂರಿನ ನೂತನ ಸಮುದಾಯ ಭವನದಲ್ಲಿ ಆಯೋಜನೆಗೊಂಡ ಕಿಟ್ ವಿತರಣೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು. ಕೆದಮಳ್ಳೂರು ವಲಯ ಕಾಂಗ್ರೆಸ್ ಪ್ರಮುಖರು ತಮ್ಮ ಗ್ರಾಮದಲ್ಲಿ ಗುರುತಿಸಿದ ವಿಶೇಷ ಚೇತನರು ಹಾಗೂ ಆಶಾ ಕಾರ್ಯಕರ್ತರು ಈ ಆಹಾರ ಕಿಟ್ ಗಳನ್ನು ಪಡೆದುಕೊಂಡರು.

 ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಡಿಕೇರಿಯಂಡ ಮಹೇಶ್, ಪಂಚಾಯಿತಿ ಅಧ್ಯಕ್ಷರಾದ ಜೇಫ್ರಿ ಉತ್ತಪ್ಪ, ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ, ಪಂಚಾಯತಿ ಸದಸ್ಯರಾದ ಇಸ್ಮಾಯಿಲ್, ಪವಿತ್ರ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.