ಫುಟ್ಬಾಲ್; ನಾಪೋಕ್ಲು ಸೇಕ್ರೆಡ್ ಹಾರ್ಟ್ಸ್ ತಾಲೂಕು ಮ್ಯಟಕ್ಕೆ ಆಯ್ಕೆ
admincoorgdaily

ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು : ನಾಪೋಕ್ಲುವಿನಲ್ಲಿ ನಡೆದ 2026 -27ನೇ ಸಾಲಿನ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕುಂಜಿಲದ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳನ್ನು ಮಣಿಸಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯ ದೈಹಿಕ ಶಿಕ್ಷಕರಾಗಿ ಕೆ.ಕೆ.ಪಾಲಿಕ,ತಂಗಮ್ಮ,ಶಾಲೆ ಆಡಳಿತ ಮಂಡಳಿಯವರಾದ ಸುನಿಲ್ ಹಾಗೂ ಕಿರಣ್ ಅವರು ಕಾರ್ಯನಿರ್ವಹಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕವೃಂದ ಅಭಿನಂದನೆ ಸಲ್ಲಿಸಿದ್ದಾರೆ.