ಕುಟ್ಟ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ಮೂರು ದಿನಗಳ ಕಾಲ ವೈಫೈ ಸಂಪರ್ಕವನ್ನು ಕಡಿತಗೊಳಿಸಿ ಸಂತ್ರಸ್ತೆಗೆ ಹೊರಗಿನ ಸಂಪರ್ಕ ಸಿಗದಂತೆ ನೋಡಿಕೊಳ್ಳಲಾಗಿತ್ತೇ!

Apr 22, 2026 - 23:17
 0  1.2k
ಕುಟ್ಟ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಆರೋಪ:  ಮೂರು ದಿನಗಳ ಕಾಲ ವೈಫೈ ಸಂಪರ್ಕವನ್ನು ಕಡಿತಗೊಳಿಸಿ ಸಂತ್ರಸ್ತೆಗೆ ಹೊರಗಿನ ಸಂಪರ್ಕ ಸಿಗದಂತೆ ನೋಡಿಕೊಳ್ಳಲಾಗಿತ್ತೇ!
ಹೋಂಸ್ಟೇ

ಮಡಿಕೇರಿ, ಏ22: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ‌ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದೆ. ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ಘಟನೆ ನಡೆದಿದೆ. ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ ವೃಜೇಶ್ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಗಳಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕೊಡಗು ಜಿಲ್ಲೆಯ ಕುಟ್ಟ ಗ್ರಾಮದಲ್ಲಿರುವ ಹೋಂಸ್ಟೇಯಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮಹಿಳೆಯ ಮೇಲೆ ಝಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ನಡೆಸಿದ್ದರೂ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಲಾಗಿತ್ತು.

ಹೀಗಾಗಿ ಬರೋಬ್ಬರಿ ಮೂರು ದಿನಗಳ ಕಾಲ ವೈಫೈ ಸಂಪರ್ಕವನ್ನು ಕಡಿತಗೊಳಿಸಿ ಸಂತ್ರಸ್ತೆಗೆ ಹೊರಗಿನ ಸಂಪರ್ಕ ಸಿಗದಂತೆ ನೋಡಿಕೊಳ್ಳಲಾಗಿತ್ತು ಎಂದು ಆರೋಪಿಸಲಾಗಿದೆ. ಅಂತಿಮವಾಗಿ ವೈಫೈ ಸಂಪರ್ಕ ದೊರಕಿದ ಬಳಿಕ, ಮೈಸೂರಿಗೆ ತೆರಳುವ ನೆಪದಲ್ಲಿ ಸಂತ್ರಸ್ತೆ ಹೋಂಸ್ಟೇಯಿಂದ ಹೊರಗೆ ಬಂದಿದ್ದಾಳೆ. ಆ ಬಳಿಕವೇ ಘಟನೆ ಕುರಿತು ಅಮೆರಿಕ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದಾಳೆ. ಅದನ್ನು ಆಧರಿಸಿ ಅಮೆರಿಕ ರಾಯಭಾರ ಅಧಿಕಾರಿಗಳು ಮೈಸೂರು ಪೊಲೀಸರಿಗೆ ಇಮೇಲ್ ಮೂಲಕ ಮಾಹಿತಿ ನೀಡಿದ್ದು, ಪ್ರಕರಣ ಅಧಿಕೃತವಾಗಿ ದಾಖಲಾಗಿತ್ತು.

ಕುಟ್ಟ ಪೊಲೀಸ್ ಠಾಣೆಯಲ್ಲಿ ಕೇಸ್​​ ಬೆನ್ನಲ್ಲೇ, ಹೋಂಸ್ಟೇಯ ಕೆಲಸಗಾರ ವೃಜೇಶ್ ಮತ್ತು ಮಾಲೀಕ ವಿಶಾಲ್​​ನ ಬಂಧಿಸಿದ್ದಾರೆ. ಆರೋಪಿಗಳನ್ನು ಮೇ 3ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಬಗ್ಗೆ ಪೊಲೀಸರಿಂದ ತನಿಖೆ ಮುಂದುವರಿದಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 1
Sad Sad 1
Wow Wow 0