ವಿದೇಶ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಹೋಂ ಸ್ಟೇ ಲೈಸನ್ಸ್ ರದ್ದು

Apr 23, 2026 - 09:56
 0  453
ವಿದೇಶ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಹೋಂ ಸ್ಟೇ ಲೈಸನ್ಸ್ ರದ್ದು

ಮಡಿಕೇರಿ, ಏ. 22: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಆರೋಪದ ಮೇರೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿಯ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇ ಮಾಲೀಕ ಸೇರಿದಂತೆ ಈರ್ವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಹೋಂ ಸ್ಟೇ ನಡೆಸಲು ನೀಡಲಾಗಿದ್ದ ಪರವಾನಗಿಯನ್ನು ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.

 ಕುಟ್ಟ ಗ್ರಾಮದ ಪಿ.ಎ. ಪೊನ್ನಪ್ಪ ಎಂಬವರಿಗೆ ದೇವಿ ವಿಲ್ಲಾ ಹೋಂ ಸ್ಟೇ ನಡೆಸಲು 15-1-2024ರಂದು ಪ್ರವಾಸೋದ್ಯಮ ಇಲಾಖೆಯಿಂದ ಪರವಾನಗಿ ನೀಡಲಾಗಿದೆ. ಕಳೆದ ತಾ.12ರಂದು ಹೋಂ ಸ್ಟೇಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವದರಿಂದ ಕುಟ್ಟ ಪೊಲೀಸರು ಸ್ಟೇ ಮಾಲೀಕ ಹಾಗೂ ನೌಕರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೋಂ ಸ್ಟೇ ಪರವಾನಗಿಯನ್ನು ರದ್ದುಗೊಳಿಸುವಂತೆ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗೆ ಶಿಫಾರಸು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಪರವಾನಗಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1